Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌...

ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕೂಳೂರು ಸೇತುವೆ ಬಳಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2023 10:16 PM IST
share
ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕೂಳೂರು ಸೇತುವೆ ಬಳಿ ಪ್ರತಿಭಟನೆ

ಸುರತ್ಕಲ್, ಅ.1: ಮಂಗಳೂರು ಉತ್ತರದ ಶಾಸಕರಿಗೆ ಅಭಿವೃದ್ಧಿಯ ಭಾಷೆಯೇ ಗೊತ್ತಿಲ್ಲ. ಅಭಿವೃದ್ಧಿಯ ಕುರಿತು ಮಾತನಾಡಿಯೇ ಅವರಿಗೆ ಗೊತ್ತಿಲ್ಲ. ಅವರಿಗೆ ತಿಳಿದಿರುವುದು ಧರ್ಮಗಳ ಮಧ್ಯೆ ಪ್ರಚೋಧಿಸುವ ಭಾಷೆ ಮಾತ್ರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ ಶಾಸಕ ಭರತ್‌ ಶೆಟ್ಟಿ ಅವರ ವಿರುದ್ಧ ಕಿಡಿಕಾರಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ದುರಾವಸ್ಥೆ ಮತ್ತು ಕೂಳೂರು ಸೇತುವೆಯ ಆಮೆಗತಿಯ ಕಾಮಗಾರಿಗಳನ್ನು ಖಂಡಿಸಿ ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕೂಳೂರು ಸೇತುವೆಯ ಬಳಿ ಸಡೆಸಲಾದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಪಂಪ್ವೆಲ್‌ ಮೇಲ್ಸೇತುವೆ ಮಾಡಲು ದ.ಕ. ಸಂಸದರಿಗೆ 10 ವರ್ಷ ಬೇಕಾಯಿತು. ಇನ್ನು ಕೆಪಿಟಿ, ನಂತೂರು ಸೇತುವೆ ನಿರ್ಮಾಣಕ್ಕೆ 20ವರ್ಷ ಬೇಕಾಗಬಹುದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ. ಆ ಬಳಿಕ ನಾವೇ ಒಂದೆರಡು ವರ್ಷಗಳಲ್ಲಿ ಇಲ್ಲಿನ ಸೇತುವೆಗಳನ್ನು ನಿರ್ಮಾಣ ಮಾಡುತ್ತೇವೆ. ಅಲ್ಲಿಯ ವರೆಗೂ ನೀವು ದಯಮಾಡಿ ಸುಮ್ಮನಿರಿ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ವಿರುದ್ಧ ವ್ಯಂಗ್ಯವಾಡಿದರು.

ಸುರತ್ಕಲ್‌ ಟೋಲ್‌ ಗೇಟ್‌ನಲ್ಲಿ ಟೋಲ್‌ ಸಂಗ್ರಹಕ್ಕೆ ಬೇಕಾಗುವಂತೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ ಇನಾಯತ್‌ ಅಲಿ, ಮೊದಲು ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ಪರಿಹರಿಸುವ ಕಡೆ ಗಮನಕೊಡಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇದ ಕ್ಕಿಂತಲೂ ಉಗ್ರ ಸ್ವರೂಪದ ಹೋರಾಟಗಳನ್ನು ಸಂಘಟಿಸಲಾಗುವುದು ಎಂದು ಶಾಸಕರು ಮತ್ತು ಸಂಸದರಿಗೆ ಎಚ್ಚರಿಕೆ ನೀಡಿದರು.

ಬಳಿಕ ಮಾತನಾಡಿದ ಕಾಂಗ್ರೆಸ್‌ ಮುಖಂಡ ಎಂ.ಜಿ. ಹೆಗ್ಡೆ, ನಮ್ಮ ಸಂಸದರು, ರಸ್ತೆಗಳ ಹೊಂಡಗುಂಡಿಗಳ ಬಗ್ಗೆ ಮಾತ ನಾಡಬೇಡಿ, ಲವ್‌ ಜಿಹಾದ್‌ ಬಗ್ಗೆ ಮಾಡನಾಡುವಂತೆ ಸಾರ್ವಜಿಕರಿಗೆ ಕರೆ ನೀಡುತ್ತಿದ್ದಾರೆ. ದ.ಕ ಜಿಲ್ಲೆಯಲ್ಲಿ ವಾಹನ ಸವಾರರಿಂದ ಟೋಲ್‌ ಸಂಗ್ರಹ ಮಾಡಿಕೊಂಡು ಸವಾರರಿಗೆ ಯಾವುದೇ ರೀತಿಯ ಮೂಲಸೌಕರ್ಯಗಳನ್ನೂ ನೀಡಲಾ ಗುತ್ತಿಲ್ಲ. ಇಲ್ಲಿನ ಹೆದ್ದಾರಿ ವಾಹನ ಸವಾರರಿಗೆ ಸಾಪವಾಗಿ ಪರಿಣಮಿಸಿದೆ ಎಂದು ನುಡಿದರು.

ಪ್ರತಿಭಟನೆಯಲ್ಲಿ ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕಾರ್ಪೊರೇಟರ್‌ ಅನಿಲ್‌ ಕುಮಾರ್‌, ಹರಿನಾಥ್‌, ಶಶಿದರ ಹೆಗ್ಡೆ, ಗೋವರ್ಧನ್‌ ಶೆಟ್ಟಿಗಾರ್‌, ಪ್ರತಿಭಾ ಕುಳಾಯಿ, ಮಹಾಬಲ ಮಾರ್ಲ, ಪದ್ಮನಾಬ ಅಮೀನ್‌, ನಾಗವೇಣಿ, ಕವಿತಾ ಸನಿಲ್‌, ಚಂದ್ರಹಾಸ ಪೂಜಾರಿ, ಶಮೀರ್‌ ಕಾಟಿಪಳ್ಳ, ಮೆಲ್ವಿನ್‌ ಡಿಸೋಜಾ, ರವಿಶ್ರಿಯಾನ್‌, ರಾಜೇಶ್‌ ಶೆಟ್ಟಿ ಪಡ್ರೆ, ಹಂಝ, ರಾಜೇಶ್‌ ಕುಳಾಯಿ, ಅಯಾಝ್‌ ಕೃಷ್ನಾಪುರ, ರೆಹ್ಮಾನ್‌ ಖಾಣ್‌ ಕುಂಜತ್ತಬೈಲ್‌ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X