Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಗಳ ಅಸಹಜ ಸಾವಿನ ಬಗ್ಗೆ ಅನುಮಾನವಿದೆ;...

ಮಗಳ ಅಸಹಜ ಸಾವಿನ ಬಗ್ಗೆ ಅನುಮಾನವಿದೆ; ಪೊಲೀಸ್ ತನಿಖೆಯಲ್ಲಿ ಅನ್ಯಾಯ: ಆಕಾಂಕ್ಷಾ ತಂದೆ ಆರೋಪ

ಪಂಜಾಬ್ ನಲ್ಲಿ ಧರ್ಮಸ್ಥಳದ ಯುವತಿಯ ನಿಗೂಢ ಮೃತ್ಯು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 May 2025 3:51 PM IST
share
ಮಗಳ ಅಸಹಜ ಸಾವಿನ ಬಗ್ಗೆ ಅನುಮಾನವಿದೆ; ಪೊಲೀಸ್ ತನಿಖೆಯಲ್ಲಿ ಅನ್ಯಾಯ: ಆಕಾಂಕ್ಷಾ ತಂದೆ ಆರೋಪ

ಬೆಳ್ತಂಗಡಿ, ಮೇ 19: ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು, ಮನೆಯವರನ್ನು ವಂಚಿಸುವ ಯತ್ನ ಅಲ್ಲಿನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಾ ಅವರ ತಂದೆ ಸುರೇಂದ್ರ ಆರೋಪಿಸಿದ್ದಾರೆ.

ಆಕಾಂಕ್ಷಾ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗೂ ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಸಹಜ ಸಾವಿನ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.

ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆರ್. ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ ಪಂಜಾಬಿ ಭಾಷೆಯಲ್ಲಿದ್ದ ಈ ಎಫ್.ಐ.ಆರ್. ವರದಿಯನ್ನು ಸ್ಥಳೀಯರ ಸಹಕಾರದಿಂದ ಓದಿ ತಿಳಿದುಕೊಂಡಾಗ ಅದರಲಿ ತನ್ನ ಮಗಳ ಸಾವುನ ಬಗ್ಗೆ ಯಾವುದೇ ಅನುಮಾನವಿಲ್ಲ. ಖಿನ್ನತೆಯಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿರುವುದು ತಿಳಿದು ಬಂದಿದೆ.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮನೆಯವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದು, ಇದಾದ ಬಳಿಕ ಇದೀಗ ಸುರೇಂದ್ರನ್ ಅವರಿಂದ ಮತ್ತೊಂದು ದೂರು ಪಡೆದುಕೊಂಡಿದ್ದಾರೆ. ದೂರಿನಲ್ಲಿ ತಮಗೆ ಮಗಳ ಸಾವಿಗೆ ಸಂಸ್ಥೆಯಲ್ಲಿ ಪ್ರಾಧ್ಯಾಪಕನಾಗಿರುವ ಸಿ.ಮ್ಯಾಥ್ಯೂ ಕಾರಣನಾಗಿದ್ದಾನೆ ಎಂದು ಆರೋಪಿಸಿದ್ದಾರೆ.

ಇದೀಗ ಆಕಾಂಕ್ಷಾ ತಂದೆ ತಿಳಿಸುವ ಮಾಹಿತಿಯಂತೆ

ಘಟನೆ ನಡೆದ ದಿನದ ಕಾಲೇಜಿನ ಸಿಸಿಟಿವಿ ಕ್ಯಾಮರಾ ಫೂಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಆಕಾಂಕ್ಷಾ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಬಿದ್ದಳು ? ಯಾರಾದರೂ ತಳ್ಳಿದರೇ? ಅಥವಾ ಆಕೆ ಹಾರಿದಳೇ ಎಂಬುದು ಎಲ್ಲೂ ಕಾಣಿಸುತ್ತಿಲ್ಲ. ಸಿಸಿಟಿವಿ ಕ್ಯಾಮರಾದ ಸಂಪೂರ್ಣ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದೇವೆ. ಆದರೆ ಅದನ್ನು ನೀಡಲು ಸಂಬಂಧಪಟ್ಟವರು ಸಿದ್ಧರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು, ಯಾವ ರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

ಪ್ರಕರಣ ದಾಖಲಿಸುವ ಬಗ್ಗೆ ಇರುವ ಗೊಂದಲದಿಂದಾಗಿ ಇನ್ನೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X