ಮೆಲ್ಕಾರ್ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ಬಂಟ್ವಾಳ : ಮಾರ್ನಬೈಲು ಇಲ್ಲಿನ ಮೆಲ್ಕಾರ್ ಪದವಿ ಕಾಲೇಜ್ ಪದವಿ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಸಹ ಪ್ರಾಧ್ಯಾಪಕರಾದ ಎಂ ಡಿ ಮಂಚಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿದ್ದು ಇದು ದೈಹಿಕ ಮಾನಸಿಕ ಬೌದ್ಧಿಕ ಬೆಳವಣಿಗೆ ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಂಗ ಕಲಾವಿದ, ಗಾಯಕ, ನಾದಾ ಮಣಿನಾಲ್ಕುರು ಮಾತನಾಡುತ್ತಾ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಇದ್ದೇ ಇದ್ದು ಪ್ರತಿಭೆ ಅನಾವರಣಗೊಳ್ಳಲು ಅದಕ್ಕೆ ಸರಿಯಾದ ವೇದಿಕೆ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್ ಮಾತನಾಡಿ ಓದುವುದು ಬರೆಯುವುದು ಮಾತ್ರ ಶಿಕ್ಷಣವಲ್ಲ, ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನಗೊಳ್ಳಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿದ್ದು ಪ್ರತಿಭಾ ದಿನಾಚರಣೆ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಒರೆಗಚ್ಚಲು ಸಹಕಾರಿಯಾಗಿದೆ ಎಂದರು.
ಉಪ ಪ್ರಾಂಶುಪಾಲೆ ಸುನೀತ ಪಿರೇರ, ಉಪನ್ಯಾಸಕರಾದ ಮಮತಾ ರಾವ್, ಕಲಾವತಿ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ತರಗತಿಯ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಅಂತಿಮ ಬಿಕಾಂ ವಿದ್ಯಾರ್ಥಿನಿ ಜಾಸ್ಮಿನ್ ಸ್ವಾಗತಿಸಿ, ಸಫಾ ಹಶೀಮ ಧನ್ಯವಾದಗೈದರು. ಅಸ್ಬಾಹುನ್ನಿಸ ಕಾರ್ಯಕ್ರಮ ನಿರೂಪಿಸಿದರು.