ಮಂಗಳೂರು | ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ಮಂಗಳೂರು,ನ.23: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಐಕ್ಯುಎಸಿ ಹಾಗೂ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಅಂತರ ತರಗತಿ ಪ್ರತಿಭಾ ಪ್ರದರ್ಶನ ಪ್ರತಿಭಾ ದಿನಾಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ರೆ. ಡಾ.ಅಲ್ವಿನ್ ಸೆರಾವೋ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ಜೈಸನ್ ಸಿಕ್ವೇರಾ, ಜ್ಞಾನ ಕಲಾ ಸಂಸ್ಥೆಯ ಸ್ಥಾಪಕ ಸುಷ್ಮಾ ಮನೋಜ್ ತೀರ್ಪುಗಾರರಾಗಿ ಸಹಕರಿಸಿದ್ದರು.
ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಯೋಜಕ ಚೇತನಾ ಕೆ., ವಿದ್ಯಾರ್ಥಿ ಕ್ಷೇಮಪಾಲಕಿ ಟ್ರೆಸ್ಸಿ ಪಿಂಟೋ, ಸಾಂಸ್ಕೃತಿಕ ಸಂಘದ ಸಂಯೋಜಕಿ ಸಮಿತಾ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ಗಾಯನ, ನೃತ್ಯ, ನಾಟಕ, ಹಾಸ್ಯಪ್ರಸ್ತುತಿ ಸೇರಿದಂತೆ ವೈವಿಧ್ಯಮಯ ಕಲಾತ್ಮಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.
Next Story







