Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 2040ಕ್ಕೆ ನಗರ ಶೇ. 30 ಹಸಿರೀಕರಣದ ಗುರಿ:...

2040ಕ್ಕೆ ನಗರ ಶೇ. 30 ಹಸಿರೀಕರಣದ ಗುರಿ: ಮುಲ್ಲೈ ಮುಗಿಲನ್

‘ಅಮರ’ ನಗರ ಹಸಿರೀಕರಣ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 April 2025 2:09 PM IST
share
2040ಕ್ಕೆ ನಗರ ಶೇ. 30 ಹಸಿರೀಕರಣದ ಗುರಿ: ಮುಲ್ಲೈ ಮುಗಿಲನ್

ಮಂಗಳೂರು, ಎ. 21: ನಗರ ವ್ಯಾಪ್ತಿಯಲ್ಲಿ 2023ರಲ್ಲಿ ನಡೆದ ಮರಗಳ ಸಮೀಕ್ಷೆ ಪ್ರಕಾರ ನಗರವು ಶೇ. 6.24 ರಷ್ಟು ಮಾತ್ರವೇ ಹಸಿರೀಕರಣದಿಂದ ಕೂಡಿದ್ದು, ಅದನ್ನು 2040ರ ವೇಳೆಗೆ ಶೇ. 30ಕ್ಕೇರಿಸಲು ‘ಅಮರ’ ನಗರ ಹಸಿರೀಕರಣ ಅಭಿಯಾನದ ಮೂಲಕ ಕ್ರಮ ವಹಿಸಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ಸೋಮವಾರ ‘ಅಮರ’ ನಗರ ಹಸಿರೀಕರಣ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಮರ ಸಮೀಕ್ಷೆಯ ಸಂದರ್ಭ ಗುರುತಿಸಲಾದ 19000 ಮರಗಳನ್ನು ಸಂಕ್ಷಿಸುವುದು ಹಾಗೂ ಜಾಗ ಇರುವಲ್ಲಿ ಸೂಕ್ತ ಮರಗಳನ್ನು ಬೆಳೆಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಮರ ಅಭಿಯಾನದಡಿ ಈಗಿರುವ ಮರಗಳನ್ನು ಸಂರಕ್ಷಿಸಿ ಪೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಇತರರ ಪಾಲ್ಗೊಳ್ಳುವಿಕೆಗೆ ಪೂರಕವಾಗಿ ‘ಮರಗಳ ದತ್ತುಪಡೆಯುವ’ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಇದರ ಜತೆಯಲ್ಲೇ ಮುಂದಿನ ಹಂತವಾಗಿ ಎಲ್ಲಿ ಮರಗಳನ್ನು ಬೆಳೆಸಬಹುದು ಎಂಬ ಬಗ್ಗೆ ಜಾಗಗಳನ್ನು ಗುರುತಿಸಲಾಗುತ್ತದೆ ಎಂದವರು ಹೇಳಿದರು.

ಈ ಅಭಿಯಾನದಡಿ ವಾರ್ಡ್‌ಗೆ 500ರಂತೆ ಸುಮಾರು 30000 ಮರಗಳನ್ನು ನೆಡುವ ಜತೆಗೆ 50 ಸಾವಿರದಿಂದ 1 ಲಕ್ಷದವರೆಗೆ ಮ್ಯಾಂಗ್ರೋವ್ಸ್‌ಗಳನ್ನು ನೆಡುವ ಬಗ್ಗೆಯೂ ಕ್ರಮ ವಹಿಸಲಾಗಿದೆ. ಗುರುತಿಸಲಾದ ಮರಗಳಿಗೆ ಜಿಯೋ ಟ್ಯಾಗಿಂಗ್ ಜತೆಗೆ ಮೇಲ್ವಿಚಾರಣೆಯೂ ನಡೆಯಲಿದೆ. ನಗರದ ರಸ್ತೆಗಳ ವಿಭಜಕಗಳಲ್ಲಿಯೂ ಗಿಡಗಳನ್ನು ಬೆಳೆಸಿ ಬಳಕೆಯಾದ ನೀರನ್ನು ಬಳಸಿ ಅವುಗಳ ಪೋಷಣೆಗೆ ಕ್ರಮ ವಹಿಸಲಾಗುವುದು. ಸಮಗ್ರ ಪಾಲುದಾರಿಕೆಯ ಮೂಲಕ ಮುಂದಿನ ಹಂತದಲ್ಲಿ ಆ ಮರಗಳ ನಿರ್ವಹಣೆಯೂ ಮುಂದಿನ ಹಂತದಲ್ಲಿ ಆಗಲಿದೆ. ಎನ್‌ಸಿಸಿ, ಎನ್‌ಎಸ್‌ಎಸ್, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಕೆಎಸಂಪಿಸಿಬಿ, ಕ್ರೆಡೈ, ಎನ್‌ಜಿಒಗಳು, ನಾಗರಿಕರ ಸಹಭಾಗಿತ್ವದಲ್ಲಿ ಈ ಕಾರ್ಯಗಳು ನಡೆಯಲಿವೆ ಎಂದವರು ಹೇಳಿದರು.

ಕಾರ್ಯಕ್ರಮದ ರುವಾರಿ, 2023ರಲ್ಲಿ ನಗರದ ಮರ ಸಮೀಕ್ಷೆ ನಡೆಸಿರುವ ಡಾ. ಸ್ಮಿತಾ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಮರಗಳು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ. ನಮ್ಮ ಈ ಪೀಳಿಗೆಯು ಹಿಂದಿನಿಂದ ನಮಗೆ ಬಳುವಳಿಯಾಗಿ ಬಂದಿರುವ ಪ್ರಕೃತಿಯನ್ನು ಸಂರಕ್ಷಿಸುವಲ್ಲಿ ವಿಫಲವಾಗಿದೆ. ಇದೇ ಕಾರಣಕ್ಕೆ ಪ್ರಸಕ್ತ ದಿನಗಳಲ್ಲಿ ವಾತಾವರಣದಲ್ಲಿ ಬಿಸಿ ಹವೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಪೀಳಿಗೆಗೆ ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಪರಿಸರದ ಮೇಲಿನ ನಮ್ಮ ಋಣವನ್ನು ತೀರಿಸಬೇಕು. ಎಲ್ಲರೂ ಈ ಕಾರ್ಯದಲ್ಲಿ ಕೈಜೋಡಿಸಿದರೆ ನಾವು ಸಫಲರಾಗುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಮರ ಅಭಿಯಾನದಡಿ ಮರಗಳ ದತ್ತು ಪಡೆಯುವ ಅಧಿಕೃತ ಆ್ಯಪ್‌ಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಎಫ್ ಆ್ಯಂಟನಿ ಮರಿಯಪ್ಪ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ, ಸಿಎಫ್‌ಎಎಲ್‌ನ ವಿಜಯ್ ಮೊರಾಸ್, ಡಾ. ಕೆ.ಆರ್. ಚಂದ್ರಶೇಖರ್, ಅರವಿಂದ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

ಸಿಎಫ್‌ಎಎಲ್‌ನ ಸಂಶೋಧನಾ ಸಹಾಯಕಿ ರಶ್ಮಿ ಕೆ. ಕಾರ್ಯಕ್ರಮ ನಿರೂಪಿಸಿದರು.

‘ಎಲ್ಲಾ ವ್ಯವಸ್ಥೆಗಳನ್ನು ಕ್ರೋಢೀಕರಿಸಿಕೊಂಡು ಭವಿಷ್ಯಕ್ಕಾಗಿ ಪ್ರಕೃತಿ ಉಳಿಸಿ ಅದರ ಜತೆ ಬೆಳೆಯಬೇಕಾದ ಅನಿವಾರ್ಯತೆ ನಮ್ಮದು. ಈ ನಿಟ್ಟಿನಲ್ಲಿ ಎಲ್ಲಿ, ಹೇಗೆ ಮರಳನ್ನು ಸಂರಕ್ಷಿಸುವುದು ಹಾಗೂ ಬೆಳೆಸುವುದು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಲುಪಬೇಕಾಗಿದೆ’ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.

‘ಅಮರ’ ನಗರ ಹಸಿರೀಕರಣ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗಿದ್ದು, ಎ. 30ರಿಂದ ವಾರ್ಡ್‌ಗಳ ದತ್ತು ಪ್ರಕ್ರಿಯೆ, ಜೂ. 5ರಂದು ವಿಶ್ವ ಪರಿಸರ ದಿನದಂದು ಗಿಡ ವಿತರಣೆ ಮತ್ತು ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಆ. 15ರಂದು ಒಟ್ಟು ಕಾರ್ಯಕ್ರಮದ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು ಎಂದು ಡಾ. ಸ್ಮಿತಾ ಹೆಗ್ಡೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X