Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೆಸ್ಕಾಂನಿಂದ ಕೆಇಆರ್‌ಸಿಗೆ ದರ ಏರಿಕೆ...

ಮೆಸ್ಕಾಂನಿಂದ ಕೆಇಆರ್‌ಸಿಗೆ ದರ ಏರಿಕೆ ಪ್ರಸ್ತಾವ: ಯುನಿಟ್‌ಗೆ 59 ಪೈಸೆ ಹೆಚ್ಚಳಕ್ಕೆ ಮನವಿ

ಸಾರ್ವಜನಿಕರು, ಕೈಗಾರಿಕಾ ಸಂಸ್ಥೆಗಳ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ12 Feb 2024 3:37 PM IST
share

ಮಂಗಳೂರು, ಫೆ. 12: ಕಂದಾಯ ಕೊರತೆಯನ್ನು ಸರಿದೂಗಿಸುವ ಸಲುವಾಗಿ ಪ್ರತಿ ಯೂನಿಟ್‌ಗೆ ಸರಾಸರಿ 59 ಪೈಸೆ ದರ ಹೆಚ್ಚಿಸಬೇಕೆಂಬ ಮೆಸ್ಕಾಂ ಪ್ರಸ್ತಾವನಕ್ಕೆ ವಿವಿಧ ಕೈಗಾರಿಕೆಗಾ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಹಾಲಿ ಇರುವ ದರವೇ ದುಬಾರಿಯಾಗಿರುವ ಕಾರಣ ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳಕ್ಕೆ ಅವಕಾಶ ನೀಡಬಾರದು ಎಂಬ ಒತ್ತಾಯ ಕರ್ನಾಟಕ ವಿದ್ಯುಚ್ಛಕ್ತಿ ಆಯೋಗಕ್ಕೆ ಸಲ್ಲಿಕೆಯಾಗಿದೆ.

ಬಿಜೈನಲ್ಲಿರುವ ಮೆಸ್ಕಾಂನ ಸಭಾಭವನದಲ್ಲಿ ಸೋಮವಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆಯ ಕುರಿತು ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಯಿತು.

ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರೆ, ಸದಸ್ಯ ಎಂ.ಡಿ. ರವಿ ಸಭಾಭವನದಲ್ಲಿ ಹಾಜರಿದ್ದು, ಆಕ್ಷೇಪಣೆಗಳನ್ನು ಆಲಿಸಿದರು.

ಎಂಎಸ್‌ಎಂಇಗಳು ಈಗಾಗಲೇ ಸಂಕಷ್ಟದಲ್ಲಿವೆ. ಅದರ ಜತೆಗೆ ವಿದ್ಯುತ್ ದರ ಹೆಚ್ಚಳ ಮಾಡಿದರೆ ತೊಂದರೆ ಆಗಲಿದೆ ಎಂದು ಕೆಸಿಸಿಐನ ಪ್ರತಿನಿಧಿಗಳು ಸಭೆಯಲ್ಲಿ ಒತ್ತಾಯಿಸಿದರು.

ಬಿ.ಎ. ನಝೀರ್ ಅವರು ಮತನಾಡಿ, ಪ್ರಸಕ್ತ ಸನ್ನಿವೇಶಗಳಲ್ಲಿ ಸಾಕಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿರುವುದರಿಂದ ಗುತ್ತಿಗೆ ಬೇಡಿಕೆಗಿಂತ ಅಲ್ಪ ಪ್ರಮಾಣದಲ್ಲಿ ಹೆಚ್ಚುವರಿ ವಿದ್ಯುತ್ ಬಳಕೆ ಮೇಲೆ ದಂಡ ಹಾಕುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರಲ್ಲದೆ, ಪ್ರೀಪೇಯ್ಡ್ ಮೀಟರ್ ಅಳವಡಿಕೆ ಜಾರಿಯಾಗಿಲ್ಲ ಎಂದರು.

ಪ್ರೀಪೇಯ್ಡ್ ಮೀಟರ್ ಯಾರು ಕೇಳಿದರೂ ಅಳವಡಿಸಲು ಕ್ರಮ ವಹಿಸುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ತಿಳಿಸಿದರು.

ಆಕ್ಷೇಪ ಸಲ್ಲಿಕೆ ಮಾತ್ರ; ದರ ಹೆಚ್ಚಳ ಮುಂದುವರಿಕೆ

ಮೀನುಗಾರಿಕೆಯನ್ನೇ ಅವಲಂಬಿಸಿ ಕಾರ್ಯಾಚರಿಸುತ್ತಿರುವ ಮಂಜುಗಡ್ಡೆ ಸ್ಥಾವರಗಳ ವತಿಯಿಂದ ಪ್ರತಿ ಬಾರಿ ವಿದ್ಯುತ್ ದರ ಏರಿಕೆ ಮಾಡದಂತೆ ಆಯೋಗಕ್ಕೆ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ. ಆದರೆ ಆಯೋಗ ಮಾತ್ರ ಪ್ರತಿ ಬಾರಿ ದರ ಹೆಚ್ಚಳದ ಮನವಿಯನ್ನು ಪುರಸ್ಕರಿಸುತ್ತಿದೆ. ಇದರಿಂದಾಗಿ ಕನಿಷ್ಟ 5 ಅಥವಾ 10 ಪೈಸೆ ಹೆಚ್ಚಳದಿಂದಲೂ ಮಂಜುಗಡ್ಡೆ ಸ್ಥಾವರಗಳಿಗೆ ಭಾರೀ ದೊಡ್ಡ ಹೊಡೆತ ಬೀಳುತ್ತದೆ. ಈ ಬಗ್ಗೆ ಆಯೋಗ ಪರಿಣಿಸಬೇಕು ಎಂದು ಕರ್ನಾಟಕ ಮಂಜುಗಡ್ಡೆ ಸ್ಥಾವರಗಳ ಪರವಾಗಿ ರಾಜೇಂದ್ರ ಸುವರ್ಣ ಆಗ್ರಹಿಸಿದರು.

ಕಂಪನಿಗಳ ಬಾಕಿ ವಸೂಲಿ ಮಾಡಿ

ಮೆಸ್ಕಾಂ ನೀಡಿರುವ ವರದಿಯ ಪ್ರಕಾರ ಕಳೆದ ಆರ್ಥಿಕ ವರ್ಷದಲ್ಲಿ ಎಲ್‌ಟಿ, ಗೃಹ ಬಳಕೆಯಲ್ಲಿ ಕಡಿಮೆಯಾಗಿದ್ದರು ಎಚ್‌ಟಿ ಬಳಕೆದಾರರು ಹೆಚ್ಚಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಆದಾಯ ಜಾಸ್ತಿ ಆಗಿದೆ. ಆದರೆ, ದರ ಏರಿಕೆ ಪ್ರಸ್ತಾವದಲ್ಲಿ ಅಗತ್ಯ ಕಾರಣವನ್ನು ನೀಡಲಾಗಿಲ್ಲ. ಎಂಎಸ್‌ಇಝೆಡ್‌ಗಳಿಗೆ ಇಲ್ಲದ ದರ ಏರಿಕೆ ಸಣ್ಣ ಗ್ರಾಹಕರಿಗೆ ಯಾಕೆ ಎಂದು ಭಾರತೀಯ ಕಿಸಾನ್ ಸಂಘದ ಸತ್ಯನಾರಾಯಣ ಉಡುಪ ಪ್ರಶ್ನಿಸಿದರು.

ರೈತರ ಐಪಿ ಸೆಟ್‌ಗಳಿಗೆ ಮೀಟರಿಂಗ್ ಅಳವಡಿಕೆ ಮಾಡಬೇಕೆಂದು ಆಗ್ರಹಿಸಿದ ಅವರು, ಮೆಸ್ಕಾಂಗೆ ಅನೇಕ ಕಂಪನಿಗಳಿಂದ ಇನ್ನೂ 365 ಕೋಟಿ ರೂ.ಗಳ ಬಾಕಿ ಇರುವುದಾಗಿ ಲೆಕ್ಕ ನೀಡಿದ್ದಾರೆ. ಮೈಸೂರು ಪೇಪರ್ ಮಿಲ್ 220 ಕೋಟಿ ರೂ. ಬಾಕಿ ಇರುವುದಾಗಿ ಹೇಳಿದ್ದಾರೆ. ಇಂತಹ ಬಾಕಿಯನ್ನು ವಸೂಲು ಮಾಡುವಲ್ಲಿ ಕ್ರಮ ಆಗಬೇಕು. ಈಗಾಗಲೇ ಉತ್ತಮ ಆದಾಯ ಪಡೆಯುವ ಮೆಸ್ಕಾಂ ದರ ಏರಿಕೆ ಮಾಡಿ ಹಣ ಸಂಗ್ರಹಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ದರ ಏರಿಕೆ ಪ್ರಸ್ತಾವದ ಬಗ್ಗೆ ಗ್ರಾಹಕರಿಂದ ಆಕ್ಷೇಪಣೆ ಸ್ವೀಕರಿಸಲಾಗುತ್ತದೆಯೇ ಹೊರತು ಗ್ರಾಹಕರ ಪರವಾಗಿ ಆಯೋಗದಿಂದ ತೀರ್ಪು ಬಂದಿಲ್ಲ ಎಂದು ಸಾರ್ವಜನಿಕರ ಪರವಾಗಿ ಮಾತನಾಡಿದ ಜಿ.ಕೆ. ಭಟ್ ಹೇಳಿದರು.

ಕೇಂದ್ರ ಸರಕಾರವು ಸೋಲಾರ್ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದರೆ, ರಾಜ್ಯ ಸರಕಾರ ನಿರುತ್ಸಾಹ ತೋರುತ್ತಿದೆ. ಹಿಂದೆ 9 ರೂ.ಗೆ ಸೋಲಾರ್ ವಿದ್ಯುತ್ ಖರೀದಿಯಾಗುತ್ತಿದ್ದರೆ, ಈಗ ಅದನ್ನು 4 ರೂ.ಗಳಿಗೆ ಇಲಿಖೆ ಮಾಡಲಾಗಿದೆ. ಕನಿಷ್ಟ 10 ರೂ. ಒದಗಿಸಬೇಕು ಎಂದು ಅವರು ಈಸಂದರ್ಭ ಆಗ್ರಹಿಸಿದರು.

ಸ್ಲ್ಯಾಬ್ ಪ್ರಕಾರ ದರ ನಿಗದಿಯಾಗಲಿ

ಹಿಂದಿನಂತೆ ಸ್ಲ್ಯಾಬ್ ಆಧಾರದಲ್ಲಿ ವಿದ್ಯುತ್ ದರವನ್ನು ಮುಂದುವರಿಸಬೇಕು. ಇಲ್ಲವಾದಲ್ಲಿ ಗ್ಯಾರಂಟಿ ಯೋಜನೆ ಇಲ್ಲದ ಗೃಹ ಬಳಕೆಯ ವಿದ್ಯುತ್ ಗ್ರಾಹಕರಿಗೆ ದೊಡ್ಡ ಹೊರೆಯಾಗುತ್ತಿದೆ ಎಂದು ಸಾರ್ವಜನಿಕರ ಪರವಾಗಿ ಹನುಮಂತ ಕಾಮತ್ ಆಗ್ರಹಿಸಿದರು.

ಪ್ರಸಕ್ತ ಗೃಹ ಬಳಕೆಯ ಗ್ರಾಹಕರಿಗೆ 200 ಯುನಿಟ್‌ವರೆಗೂ ವಿದ್ಯುತ್ ಉಚಿತವಾಗಿ ಸಿಗುತ್ತಿದೆಯಲ್ಲಾ ಎಂದು ಆಯೋಗದ ಅಧ್ಯಕ್ಷರು ಪ್ರಶ್ನಿಸಿದಾಗ, ನಾವು ಅರ್ಜಿ ಹಾಕಿದರೂ ಪರಿಗಣಿಸಿಲ್ಲ. ನಾಲ್ಕೈದು ತಿಂಗಳ ಸರಾಸರಿ ಲೆಕ್ಕಾಚಾರದಲ್ಲಿ ಈ ಯೋಜನೆ ಬಹಳಷ್ಟು ಗ್ರಾಹಕರಿಗೆ ಅನ್ವಯವಾಗುತ್ತಿಲ್ಲ. ಇದರಿಂದಾಗಿ ವಿದ್ಯುತ್ ದರ ರೇಟಿನ ಏಟು ಯಮಲೋಕದ ಗೇಟಿನಂತಾಗಿದೆ ಎಂದು ಹನುಮಂತ ಕಾಮತ್ ಪ್ರತಿಕ್ರಿಯಿಸಿದರು.

ಮೆಸ್ಕಾಂ ಸಾರ್ವಜನಿಕ ವಿಚಾರಣೆಯ ಬಳಿಕ ಕೆಇಆರ್‌ಸಿಯಿಂದ ಎಂಎಸ್‌ಇಝೆಡ್‌ನ ಅಹವಾಲನ್ನು ಸ್ವೀಕರಿಸಲಾಯಿತು.

2024-25ನೆ ಸಾಲಿನಲ್ಲಿ 5281.94 ಕೋಟಿ ರೂ. ಕಂದಾಯದ ಬೇಡಿಕೆ ಹಾಗೂ 4929.98 ಕೋಟಿ ರೂ. ಆದಾಯವನ್ನು ನಿರೀಕ್ಷಿಸಲಾಗಿದ್ದು, 351. 96 ಕೋಟಿ ರೂ. ಕಂದಾಯ ಕೊರತೆ ಉಂಟಾಗಲಿದೆ. ಪ್ರತಿ ಯುನಿಟ್‌ಗೆ ಸರಾಸರಿ 8.91 ರೂ. ವಿದ್ಯುತ್ ಸರಬರಾಜು ವೆಚ್ಚವಾಗಲಿದ್ದು, ಹಾಲಿ ದರಗಳಲ್ಲಿ ಸರಾಸರಿ 8.32 ರೂ. ಆದಾಯ ನಿರೀಕ್ಷಿಸಲಾಗಿದೆ. ಇದರಿಂದಾಗಿ 59 ಪೈಸೆ ದರ ಏರಿಕೆಯ ಅಗತ್ಯವಿದೆ ಎಂದು ಮೆಸ್ಕಾಂ ಎಂಡಿ ಪದ್ಮಾವತಿ ಅವರು ಆಯೋಗಕ್ಕೆ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X