Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ...

ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ : ನ್ಯಾ. ಅಬ್ದುಲ್ ನಝೀರ್

ವಾರ್ತಾಭಾರತಿವಾರ್ತಾಭಾರತಿ31 Jan 2026 9:44 PM IST
share
ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ : ನ್ಯಾ. ಅಬ್ದುಲ್ ನಝೀರ್

ಮಂಗಳೂರು: ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸು ತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ.

ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಲಯವು ಕಾನೂನಿನ ಆಡಳಿತದ ಸಂಕೇತವಾಗಿದ್ದು, ಸಮಾಜದಲ್ಲಿ ಅನ್ಯಾಯದ ವಿರುದ್ಧ ಪ್ರತಿಯೊಬ್ಬರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯಗಳಿಗೆ ಆಧುನಿಕ ಕಟ್ಟಡ ಮತ್ತು ತಂತ್ರಜ್ಞಾನಗಳು ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಪೂರಕ ಅಗತ್ಯಗಳಾಗಿದೆ ಎಂದು ಅವರು ಹೇಳಿದರು.

ಸಂವಿಧಾನ ರಚನೆ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹರಾವ್ ಅವರು ಮಹತ್ತರ ಪಾತ್ರ ನಿರ್ವಹಿಸಿದ್ದು, ಸಂವಿಧಾನದಲ್ಲಿ ಹಲವು ಪ್ರಮುಖ ಅಂಶಗಳನ್ನು ಕ್ರೋಢಿಕರಿಸಿರುತ್ತಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಕೂಡ ಬೆನಗಲ್‌ ಅವರ ಶ್ರಮವನ್ನು ಗುರುತಿಸಿದ್ದರು ಎಂದು ಅಬ್ದುಲ್‌ ನಝೀರ್‌ ಹೇಳಿದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭುಬಖ್ರು ಮಾತನಾಡಿ, ನ್ಯಾಯಾಲಯಗಳ ಕಟ್ಟಡದೊಂದಿಗೆ ನ್ಯಾಯಾಧೀಶರ ನಿಷ್ಠೆ ನ್ಯಾಯವಾದಿಗಳ ಬದ್ಧತೆ, ಹಾಗೂ ಸಿಬ್ಬಂದಿಗಳ ಕರ್ತವ್ಯವು ನ್ಯಾಯ ಒದಗಿಸಲು ಅಗತ್ಯವಾಗಿದೆ ಎಂದು ಹೇಳಿದರು.

*ಒಟ್ಟು 12 ನ್ಯಾಯಾಲಯ ಸಭಾಂಗಣ: ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಒಟ್ಟು 12 ನ್ಯಾಯಾಲಯ ಸಭಾಂಗಣಗಳಿವೆ. ಆಧುನಿಕ ಶೈಲಿಯಲ್ಲಿಕಟ್ಟಡ ನಿರ್ಮಾಣ ಮಾಡಿರುವುದು ಶ್ಲಾಘನೀಯ. ನ್ಯಾಯಾಲಯವು ಸಾಂವಿಧಾನಿಕ ಆಡಳಿತದ ಸಂಕೇತವಾಗಿದೆ ಎಂದು ಹೇಳಿದರು.

*ಮಂಗಳೂರಿನಲ್ಲಿ 60 ಕೋಟಿರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಕಟ್ಟಡ : ಆರೋಗ್ಯ ಮತ್ತು ದಕ್ಷಿಣಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪುತ್ತೂರು ನ್ಯಾಯಾಲಯ ಕಟ್ಟಡ ರಾಜ್ಯದಲ್ಲಿಯೇ ತಾಲೂಕು ಕೇಂದ್ರದಲ್ಲಿರುವ ಅತಿದೊಡ್ಡ ಕಟ್ಟಡವಾಗಿದೆ. ಇಲ್ಲಿನ ಮೂಲ ಸೌಕರ‌್ಯಗಳಿಗೆ ಸರಕಾರವು ಎಲ್ಲಾರೀತಿಯ ಬೆಂಬಲ ನೀಡಲಿದೆ ಎಂದು ಹೇಳಿದರು.

ಮಂಗಳೂರಿನಲ್ಲಿ 60 ಕೋಟಿರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಕಟ್ಟಡ ಬ್ಲಾಕ್ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಬೆಳ್ತಂಗಡಿಯಲ್ಲಿ 9 ಕೋಟಿ ರೂ. ಹೊಸ ನ್ಯಾಯಾಲಯ ಕಟ್ಟಡಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠಸ್ಥಾಪನೆ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು.

ಪುತ್ತೂರು ಶಾಸಕ ಅಶೋಕ್‌ ಕುಮಾರ್‌ರೈ ಮಾತನಾಡಿ, ಪುತ್ತೂರು ನ್ಯಾಯಾಲಯ ಸಂಕೀರ್ಣಕ್ಕೆ ಎಲ್ಲಾ ಮೂಲ ಸೌಕರ್ಯ ಒದಗಿಸಲು ಸರಕಾರ ನೆರವು ನೀಡಲಿದೆ. ಪುತ್ತೂರು ಜಿಲ್ಲಾ ನ್ಯಾಯಾಲಯದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕನ್ನು ಸೇರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್‌ಕುಮಾರ್, ಜಿಲ್ಲಾಧಿಕಾರಿದರ್ಶನ್ ಎಚ್ ವಿ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಸ್ವಾಗತಿಸಿದರು.

Tags

dutycourtsprovidejusticecommon man
share
ವಾರ್ತಾಭಾರತಿ
ವಾರ್ತಾಭಾರತಿ
Next Story
X