Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.9ರಂದು ನವೀಕೃತ ‘ವಿಶ್ವಸೌಧ’ ಕಟ್ಟಡ...

ನ.9ರಂದು ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Nov 2025 3:12 PM IST
share

ಮಂಗಳೂರು, ನ.6: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ಐ ಸೊಸೈಟಿ ಲಿ.ನ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ನ.9ರಂದು ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಕಟಪಾಡಿ ಪಡುಕುತ್ಯಾರು ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ದೀಪ ಪ್ರಜ್ವಲನೆ ನಡೆಸಿ, ಆಶೀರ್ವಚನ ನೀಡುವರು. ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಉದ್ಘಾಟಿಸುವರು. ಸ್ಪೀಕರ್ ಯು.ಟಿ. ಖಾದರ್ ಲಿಫ್ಟ್ ಉದ್ಘಾಟಿಸುವರು. ನವೀಕೃತ ಆಡಳಿತ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನವೀಕೃತ ಕೊಟ್ಟಾರಚೌಕಿ ಶಾಖೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ, ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯನ್ನು ಕೆನರಾ ಜ್ಯುವೆಲ್ಲರ್ಸ್‌ನ ಧನಂಜಯ ಪಾಲ್ಕೆ ಉದ್ಘಾಟಿಸುವರು. ಶಿಲ್ಪಿ ಡಾ. ಅರುಣ್ ಯೋಗಿರಾಜ್ ಅವರು ಪಾಲ್ಕೆ ಬಾಬುರಾಯ ಆಚಾರ್ಯ ಪುತ್ಥಳಿ ಅನಾವರಣ ಮಾಡುವರು. ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ದ.ಕ. ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಕೆ. ಅತಿಥಿಯಾಗಿ ಭಾಗವಹಿಸುವರು ಎಂದು ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ 60 ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಚಟುವಟಿಕೆ ಆಯೋಜಿಸಿದ್ದು, ಇದುವರೆಗೆ 59 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಆರೋಗ್ಯ, ರಕ್ತದಾನ ಶಿಬಿರ, ಪರಿಸರ ಜಾಗೃತಿ, ವೈದ್ಯಕೀಯ ನೆರವು, ವಿದ್ಯಾರ್ಥಿ ವೇತನ, ಅಂಗನವಾಡಿ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಮೂಲಸೌಲಭ್ಯ, ಎರಡು ಬಡಕುಟುಂಬಗಳಿಗೆ ತಲಾ7.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, 28 ಮನೆ ನಿರ್ಮಾಣಕ್ಕೆ ಸಹಾಯ ಒದಗಿಸಲಾಗಿದೆ ಎಂದರು.

ಉಪಾಧ್ಯಕ್ಷ ಎ. ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಕೆ. ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X