Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಧಾನಸಭೆಯೊಳಗೆ ಮಾತ್ರ ಗಲಾಟೆ...

ವಿಧಾನಸಭೆಯೊಳಗೆ ಮಾತ್ರ ಗಲಾಟೆ ನಡೆಯುತ್ತೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರುತ್ತಾರೆ: ಸ್ಪೀಕರ್ ಯುಟಿ ಖಾದರ್

ಬಂಟರ ಮಾತೃಸಂಘದ ಗಣೇಶೋತ್ಸವ ಧಾರ್ಮಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ20 Sept 2023 5:21 PM IST
share
ವಿಧಾನಸಭೆಯೊಳಗೆ ಮಾತ್ರ ಗಲಾಟೆ ನಡೆಯುತ್ತೆ, ಹೊರಗಡೆ ಎಲ್ಲರೂ ಸ್ನೇಹಿತರೇ ಆಗಿರುತ್ತಾರೆ: ಸ್ಪೀಕರ್ ಯುಟಿ ಖಾದರ್

ಮಂಗಳೂರು: ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತೆ ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಿವಿಮಾತು ಹೇಳಿದರು.

ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದರು.

ಬಂಟರ ಯಾನೆ ನಾಡವರ ಮಾತೃಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಬಂಟರು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ಈ ಮೂಲಕ ಎಲ್ಲಾ ಜಾತಿ ಧರ್ಮಗಳ ಜನರ ಮಧ್ಯೆ ಪ್ರೀತಿ, ಸೋದರತೆ ಬೆಳೆದು ಸ್ವಸ್ಥ ಸಾಮರಸ್ಯದ ಸಮಾಜ ನಿರ್ಮಾಣವಾಗಲಿ. ನಾನು ಸ್ಪೀಕರ್ ಆದ ಬಳಿಕ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶ ಕೊಟ್ಟು ಸರಕಾರವನ್ನು ಸೂಕ್ತ ರೀತಿಯಲ್ಲಿ ನಡೆಯಲು ನನ್ನಿಂದಾದ ಸಹಕಾರ ನೀಡುತ್ತಿದ್ದೇನೆ. ಆದರೆ ಇದೇ ಕಾರಣಕ್ಕೆ ಸ್ಪೀಕರ್ ಸರಿಯಿಲ್ಲ ಎನ್ನುವವರೂ ಇದ್ದಾರೆ ಎಂದು ಹೇಳಿದರು.

ಬಂಟ್ಸ್ ಹಾಸ್ಟೆಲ್‌ನಲ್ಲಿ ಕೇವಲ ಬಂಟರು ಮಾತ್ರವಲ್ಲದೆ ಹಿಂದೂ ಮುಸ್ಲಿಂ ಕ್ರೈಸ್ತರು ಎಲ್ಲರೂ ವಾಸ್ತವ್ಯವಿದ್ದು ಕಲಿಯುತ್ತಿದ್ದಾರೆ. ಇದು ಇಡೀ ಸಮಾಜಕ್ಕೆ ಮಾದರಿ. ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಬಂಟ ಸಮಾಜಕ್ಕೆ ಇದ್ದು ಆ ಜವಾಬ್ದಾರಿಯನ್ನು ಬಂಟ ಸಮುದಾಯದ ಹಿರಿಯರು ತೆಗೆದುಕೊಳ್ಳಬೇಕು. ಗಣೇಶೋತ್ಸವ ಅನ್ನುವ ಧಾರ್ಮಿಕ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲಿ, ಗಣೇಶನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಶುಭ ಹಾರೈಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.

ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ.ನಾಗರಾಜ ಶೆಟ್ಟಿ, ಎಮ್ ಸಂಜೀವ ಶೆಟ್ಟಿ ಕಾಸರಗೋಡು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X