Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಳು ಕಲೆ, ಭಾಷೆ ,ಸಂಸ್ಕೃತಿಗೆ ವೇದಿಕೆ...

ತುಳು ಕಲೆ, ಭಾಷೆ ,ಸಂಸ್ಕೃತಿಗೆ ವೇದಿಕೆ ಕಲ್ಪಿಸಲು "ತುಳುಕೂಟ ಬಹರೈನ್" ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 Sept 2023 8:56 PM IST
share
ತುಳು ಕಲೆ, ಭಾಷೆ ,ಸಂಸ್ಕೃತಿಗೆ ವೇದಿಕೆ ಕಲ್ಪಿಸಲು ತುಳುಕೂಟ ಬಹರೈನ್ ಚಾಲನೆ

ಬಹರೈನ್, ಸೆ.19: ಬಹರೈನ್ ದ್ವೀಪ ರಾಷ್ಟ್ರದಲ್ಲಿ ತುಳು ಕಲೆ, ಭಾಷೆ , ಸಂಸ್ಕೃತಿಗೆ ವೇದಿಕೆಯನ್ನು ಕಲ್ಪಿಸಿ ಆಮೂಲಕ ತುಳು ಕಲೆ,ಭಾಷೆ, ಸಂಸ್ಕ್ರತಿಯನ್ನು ದ್ವೀಪದಲ್ಲಿ ಉಳಿಸಿ ಬೆಳೆಸಲಿಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ "ತುಳುಕೂಟ ಬಹರೈನ್ " ಸಂಘಟನೆಗೆ ಸೋಮವಾರ ಪ್ಯಾಪಿಲಾನ್ ರೆಸ್ಟೋರೆಂಟಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಹಿರಿಯರು "ತುಳುಕೂಟ ಬಹರೈನ್"ಗೆ ಚಾಲನೆ ನೀಡಿದರು. ದ್ವೀಪರಾಷ್ಟ್ರದಲ್ಲಿ ಸುಮಾರು ನಾಲ್ಕು ದಶಕಗಳಿಂದ ಕನ್ನಡ ತುಳು ಭಾಷೆ, ಸಂಸ್ಕೃತಿಯ ಸೇವೆಯನ್ನು ನಿರಂತರಾಗಿರುವ ಸಮಾನ ಮನಸ್ಕ ಹಿರಿಯ ಕನ್ನಡಿಗರಾದ ರಾಜ್ ಕುಮಾರ್, ಆಸ್ಟಿನ್ ಸಂತೋಷ್, ವಿಜಯ ನಾಯಕ್ ಹಾಗೂ ರಾಜೇಶ್ ಶೆಟ್ಟಿಯವರ ನೇತೃತ್ವದಲ್ಲಿ "ತುಳುಕೂಟ ಬಹರೈನ್" ಚಾಲನೆ ನೀಡಲಾಯಿತು.

ಕನ್ನಡ ಸಂಘದ ಮಾಜಿ ಅಧ್ಯಕ್ಷ ಹಾಗೂ ಇಂಡಿಯನ್ ಸ್ಕೂಲ್ ನಲ್ಲಿ 1989ರಲ್ಲಿ ಕನ್ನಡ ತರಗತಿಗಳನ್ನು ಪ್ರಾರಂಭಿಸಲು ಕಾರಣರಾಗಿದ್ದ ಸುರೇಂದ್ರ ಶೆಟ್ಟಿ, ದಕ್ಷಿಣ ಕನ್ನಡ ಮುಸ್ಲಿಂ ಅಸೋಸಿಯೇಶನ್ ಅಧ್ಯಕ್ಷರಾದ ಹಾಜಿ ಅಬ್ದುಲ್ ರಝಾಕ್, ಬಹರೇನ್ ಬಂಟ್ಸ್ ನ ಮಾಜಿ ಅಧ್ಯಕ್ಷರಾದ ಭರತ್ ಶೆಟ್ಟಿ, ಅಲ್ ಹಿಲಾಲ್ ವೈದ್ಯಕೀಯ ಸಮೂಹ ಸಂಸ್ಥೆಗಳ ಉಪಾಧ್ಯಕ್ಷ ರಾದ ಆಸೀಫ್, ಅಮ್ಮ ಕಲಾವಿದರು ಸಂಘಟನೆಯ ಮುಖ್ಯಸ್ಥರಾದ ಮೋಹನ್ ದಾಸ್ ರೈ, ವಿಶ್ವಕರ್ಮ ಬಳಗದ ಅಧ್ಯಕ್ಷರಾದ ಸತೀಶ್ ಉಳ್ಳಾಲ್, ಕೊಂಕಣ್ ಸಿಂಗರ್ಸ್ ನ ಮಾಜಿ ಅಧ್ಯಕ್ಷ ವಾಲ್ಟರ್ ನೊರೊನ್ಹಾ, ಹಿರಿಯ ಕನ್ನಡಿಗರಾದ ಹುಂತ್ರಿಕೆ ಭಾಸ್ಕರ್ ಶೆಟ್ಟಿ, ಚಂದ್ರಹಾಸ ಐಲ್, ರಾಬರ್ಟ್ ಡಿ' ಸೋಜಾ ಮುಂತಾದವರು ಸಮಾರಂಭದಲ್ಲಿ ಭಾಗವಹಿಸಿ, ಶುಭಹಾರೈಸಿದರು.

ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು "ತುಳುಕೂಟ ಬಹರೈನ್" ನ ಸಂಘಟಕರಿಗೆ ಹಾಗೂ ಬಹರೈನ್ ತುಳುವರಿಗೆ ಶುಭ ಹಾರೈಸಿ ಕಳುಹಿಸಿದ್ದ ಸಂದೇಶ ಹಾಗೂ ಆಶೀರ್ವಚನದ ವಿಡಿಯೋವನ್ನು ಇದೇ ಸಂದರ್ಭ ಪ್ರಸಾರ ಮಾಡಲಾಯಿತು.

ತುಳುಕೂಟದ ಚೊಚ್ಚಲ ಕಾರ್ಯಕ್ರಮವಾಗಿ ಮುಂದಿನ ಅಕ್ಟೊಬರ ತಿಂಗಳ 13ರಂದು ತುಳುನಾಡಿನಲ್ಲಿ ಬಿಡುಗಡೆಗೆ ಮುನ್ನವೇ ಸದ್ದು ಮಾಡುತ್ತಿರುವ ಹರಿಪ್ರಸಾದ್ ರೈ ನಿರ್ಮಾಣದ , ತ್ರಿಶೂಲ್ ಶೆಟ್ಟಿ ನಿರ್ದೇಶನದ ವಿನೀತ್ ಕುಮಾರ್, ಸಮತಾ ಅಮೀನ್ ಮುಖ್ಯ ಭೂಮಿಕೆಯಲ್ಲಿರುವ "ಪುಳಿಮುಂಚಿ" ತುಳು ಚಿತ್ರದ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನವನ್ನು ತುಳುಕೂಟ ಬಹರೈನ್ ಏರ್ಪಡಿಸಿದ್ದು, ಅದರ ಅಂಗವಾಗಿ ಇದೇ ಸಂದರ್ಭ ಚಲನಚಿತ್ರದ ಪೋಸ್ಟರನ್ನು ಅನಾವರಣಗೊ ಳಿಸಲಾಯಿತು. ಕಾರ್ಯಕ್ರಮವನ್ನು ವಿಜಯ್ ನಾಯಕ್ ನಿರೂಪಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X