ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ

ಮಂಗಳೂರು, ನ.11: ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Next Story





