Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಜಿರೆ | ಪೊಕ್ಸೊ ಪ್ರಕರಣದಲ್ಲಿ ಕರ್ತವ್ಯ...

ಉಜಿರೆ | ಪೊಕ್ಸೊ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಎಸ್ಪಿಗೆ 'ನೈಜ ಹೋರಾಟಗಾರರ ವೇದಿಕೆ' ಪತ್ರ

ವಾರ್ತಾಭಾರತಿವಾರ್ತಾಭಾರತಿ19 Nov 2023 11:38 AM IST
share
ಉಜಿರೆ | ಪೊಕ್ಸೊ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಂಗಳೂರು: 'ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ' ಎಂದು 'ನೈಜ ಹೋರಾಟಗಾರರ ವೇದಿಕೆ' ಆರೋಪಿಸಿದೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವ 'ನೈಜ ಹೋರಾಟಗಾರರ ವೇದಿಕೆ', ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಪತ್ರದ ಸಾರಾಂಶ:

''ವಿದ್ಯಾರ್ಥಿನಿ ಐದು ತಿಂಗಳ ಗರ್ಭಿಣಿಯಾದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆಯಿಂದ ವಿಟ್ಲ ಠಾಣೆಯ ಮಹಿಳಾ ಪೊಲೀಸರು ಹೇಳಿಕೆಯನ್ನು ಪಡೆದಿದ್ದಾರೆ. ಈ ವೇಳೆ ಆಕೆ ತನ್ನ ವಿದ್ಯಾಸಂಸ್ಥೆಯ ಕ್ರೀಡಾ ಶಿಕ್ಷಕ ರಮೇಶ್‌ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾಗಿ ಹೇಳಿಕೆ ನೀಡಿದ್ದಾಳೆ. ಈ ದೂರಿನ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರ ಜೊತೆಜೊತೆಗೆ ಇನ್ನಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಬರುತ್ತಿದ್ದು. ವಿದ್ಯಾರ್ಥಿನಿಯು ಮೊದಲು ಕೊಟ್ಟ ದೂರಿನಲ್ಲಿರುವ ಆರೋಪಿಯ ಹೆಸರನ್ನು ಬದಿಗಿರಿಸಿ, ಸಂತ್ರಸ್ತ ವಿದ್ಯಾರ್ಥಿನಿಯನ್ನು ಕೌನ್ಸಿಲಿಂಗ್ ಗೆ ಒಳಪಡಿಸಿ ಮತ್ತೊಂದು ಹೆಸರನ್ನು ಅವಳಿಂದ ಹೇಳಿಸಿ ಆ ವ್ಯಕ್ತಿಯ ಮೇಲೆ ಮಾತ್ರ ಎಫ್ ಐ ಆರ್ ದಾಖಲಿಸಿ ಅವರನ್ನು ಬಂಧಿಸಲಾಗಿದೆ ಎಂಬ ವ್ಯಾಪಕ ಸುದ್ದಿ ಹರಡುತ್ತಿದೆ'' ಎಂದು 'ನೈಜ ಹೋರಾಟಗಾರರ ವೇದಿಕೆ' ಪತ್ರದಲ್ಲಿ ಉಲ್ಲೇಖಿಸಿದೆ.

''ಮಂಗಳೂರಿನ ಲೇಡಿ ಘೋಷನ್ ಆಸ್ಪತ್ರೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗೆ ಸಂತ್ರಸ್ತೆ ವಿದ್ಯಾರ್ಥಿನಿ ನೀಡಿದ ಪ್ರಥಮ ಹೇಳಿಕೆ ಮತ್ತು ಪ್ರಥಮ ಮಾಹಿತಿಯ ಪ್ರಕಾರ ಶಾಲೆಯ ಪಿ.ಟಿ.ಶಿಕ್ಷಕ ರಮೇಶ್ ಹೆಸರು ಪ್ರಥಮ ವರ್ತಮಾನ ವರದಿಯಲ್ಲಿ ( FIR ) ದಾಖಲಿಸದೆ ನಂತರ ಸಂತ್ರಸ್ತೆ ವಿದ್ಯಾರ್ಥಿನಿಯನ್ನು ಕೌನ್ಸಿಲಿಂಗ್ ಮಾಡಿದ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿಯಿಂದ ಮತ್ತೊಂದು ಹೇಳಿಕೆಯನ್ನು ಪಡೆದು ಕೇಶವ ಎಂಬ ಆರೋಪಿಯ ಮೇಲೆ ಎಫ್ಐಆರ್ ದಾಖಲಾಗಿದೆ. ಎಂಬ ಮಾಹಿತಿ ಬರುತ್ತಿದೆ. ಸಂತ್ರಸ್ತೆ ವಿದ್ಯಾರ್ಥಿನಿ ಮೊದಲು ಹೇಳಿದ ಪಿ ಟಿ ಶಿಕ್ಷಕನ ರಮೇಶ್ ಹೆಸರಿನ ಜೊತೆ ಸಂತ್ರಸ್ತೆ ಎರಡನೇ ಬಾರಿ ಹೇಳಿದ ಹೇಳಿಕೆಯಲ್ಲಿನ ಕೇಶವನ ಹೆಸರು ಸೇರಿಸಿ ಎಫ್ ಐ ಆರ್ ದಾಖಲಾಗಬೇಕಾಗಿರೋದು ನ್ಯಾಯಸಮ್ಮತವಾಗಿರುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಬರುವ ವರದಿಯ ಪ್ರಕಾರ ಕೇಶವ ಎಂಬ ಹೆಸರಿನ ವ್ಯಕ್ತಿಯ ಮೇಲೆ ಮಾತ್ರ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿರುವುದು ಆಶ್ಚರ್ಯಕರ ಸಂಗತಿಯಾಗಿದೆ'' ಎಂದು ಪತ್ರದಲ್ಲಿ ತಿಳಿಸಲಾಗಿದೆ.

''ಇದು ಪೊಕ್ಸೊ ಪ್ರಕರಣವಾಗಿರುವುದರಿಂದ ಸಂತ್ರಸ್ತೆ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದ ತಕ್ಷಣ ವಿಟ್ಲ ಪೊಲೀಸ್ ಠಾಣೆಯ ಮಹಿಳಾಧಿಕಾರಿ ಸಂತ್ರಸ್ತೆಯನ್ನು ಭೇಟಿಯಾಗಿ ಹೇಳಿಕೆ ಪಡೆದ ನಂತರ ತಕ್ಷಣ ಶೂನ್ಯ ಪ್ರಥಮ ವರ್ತಮಾನ ವರದಿಯನ್ನು (ಝೀರೋ FIR) ದಾಖಲಿಸದೆ ಧರ್ಮಸ್ಥಳ ಪೊಲೀಸ್ ಠಾಣೆಯ WHC ಪ್ರಮೋದಿನಿಯವರಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗಿದೆಎಂದು ಶರ ಬರೆದಿರುವುದು ಪ್ರಾಥಮಿಕ ಹಂತದಲ್ಲಿಯೇ ತನಿಖೆಯಲ್ಲಿ ಎಡವಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ'' ಎಂದು ದೂರಲಾಗಿದೆ.

''ವಿಟ್ಲ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಮತ್ತು ಧರ್ಮಸ್ಥಳ ಠಾಣೆಯ WHC ಪ್ರಮೋದಿನಿಯವರು ಕೂಡ ಕರ್ತವ್ಯ ಲೋಪ ವ್ಯಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಕರ್ತವ್ಯ ಲೋಪದ ಜೊತೆಗೆ ಸಂತ್ರಸ್ತೆ ವಿದ್ಯಾರ್ಥಿನಿ ಮೊದಲು ನೀಡಿದ ಹೇಳಿಕೆ ಪ್ರಕಾರ ಧರ್ಮಸ್ಥಳ ಠಾಣಾಧಿಕಾರಿಗಳು ಪಿ ಟಿ ಶಿಕ್ಷಕ ರಮೇಶ ಹೆಸರನ್ನು ಪ್ರಥಮ ವರ್ತಮಾನ ವರದಿಯಲ್ಲಿ ದಾಖಲಿಸದೆ ಇದ್ದ ಪಕ್ಷದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರು (ಕಾ.ಸು) ವಿದ್ಯಾ ಕೆಜೆ, ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯ WHC ಪ್ರಮೋದಿನಿ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು'' ಎಂದು ನೈಜ ಹೋರಾಟಗಾರರ ವೇದಿಕೆ ಪೋಲಿಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X