Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ...

ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ28 May 2025 12:34 PM IST
share
ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೀನಾಮೆ

ಮಂಗಳೂರು: "ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಕಾರಣಕ್ಕೆ ಬೇಸತ್ತು ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಮುಹಮ್ಮದ್ ಶಮೀರ್ ತಿಳಿಸಿದ್ದಾರೆ.

ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳ ಹೆಡೆಮುರಿ ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ. ಇದೇ ಕಾರಣಕ್ಕೆ ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಮಾಯಕ ಯುವಕ ಅಬ್ದುಲ್ ರಹ್ಮಾನ್ ರ ಕೊಲೆಯಂತಹ ದುಷ್ಕೃತ್ಯಗಳು ಇಲ್ಲಿ ಮರುಕಳಿಸುತ್ತಿವೆ. ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿತನ ಮತ್ತು ನಿಷ್ಕ್ರಿಯತೆಯಿಂದಾಗಿ ಇವು ಸಂಭವಿಸುತ್ತಿವೆ ಎಂದವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ಸಂಘ ಪರಿವಾರದ ಸಂಘಟನೆಗಳ ಗೂಂಡಾಗಳಿಗೆ ಮುಕ್ತ ಚಲನೆಯ ಸ್ವಾತಂತ್ರ್ಯ ದೊರೆತಂತಾಗಿದೆ, ಇದು ಸರಕಾರದ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ. ಜೊತೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದ ಧೋರಣೆಯೂ ಜನರಲ್ಲಿ ಅಸಮಾಧಾನ ಉಂಟು ಮಾಡಿದೆ. ಪೊಲೀಸ್ ಇಲಾಖೆಯು ಸರಕಾರದ ಹಿಡಿತದಲ್ಲಿಲ್ಲದಿರುವುದು ಗಂಭೀರ ಕಳವಳದ ವಿಷಯವಾಗಿದೆ ಎಂದು ಮುಹಮ್ಮದ್ ಶಮೀರ್ ಹೇಳಿದ್ದಾರೆ.

ಶರಣ್ ಪಂಪ್ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂಥವರು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಚಂದವಾಗಿ ತಿರುಗಾಡುತ್ತಿದ್ದಾರೆ. ಶರಣ್ ಪಂಪ್ವೆಲ್ ನಂಥವರ ಮೇಲೆ ಪ್ರಕರಣ ದಾಖಲಾದರೂ, ಎರಡೇ ನಿಮಿಷಗಳಲ್ಲಿ ಜಾಮೀನು ದೊರೆಯುವಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಲ್ಲಿ ನ್ಯಾಯದ ಮೇಲಿನ ನಂಬಿಕೆ ಕಡಿಮೆಯಾಗಿದೆ. ಇದು ಸರಕಾರದ ಕಾನೂನು ಜಾರಿ ವ್ಯವಸ್ಥೆಯ ದೌರ್ಬಲ್ಯವನ್ನು ಬಯಲಿಗೆಳೆಯುತ್ತದೆ ಎಂದವರು ಆರೋಪಿಸಿದರು.

ಈ ಎಲ್ಲಾ ಕಾರಣಗಳಿಂದಾಗಿ ಪ್ರಸಕ್ತ ಕಾಂಗ್ರೆಸ್ ಸರಕಾರದ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ತನಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಮುಹಮ್ಮದ್ ಶಮೀರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X