Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಗ್ರಾಮ ಸಭೆಯಲ್ಲಿ ಮೂಲಭೂತ...

ಉಳ್ಳಾಲ: ಗ್ರಾಮ ಸಭೆಯಲ್ಲಿ ಮೂಲಭೂತ ಸೌಕರ್ಯಗಳದ್ದೇ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ11 Sept 2023 3:38 PM IST
share
ಉಳ್ಳಾಲ: ಗ್ರಾಮ ಸಭೆಯಲ್ಲಿ ಮೂಲಭೂತ ಸೌಕರ್ಯಗಳದ್ದೇ ಚರ್ಚೆ


ಉಳ್ಳಾಲ : ಬಸ್ ತಂಗುದಾಣ, ಕುಡಿಯುವ ನೀರು,ನಾದುರಸ್ತಿಯಲ್ಲಿರುವ ರಸ್ತೆ, ಕಳಪೆ ಕಾಮಗಾರಿ, ರಸ್ತೆ ಬದಿ ಲಾರಿ ನಿಲುಗಡೆ , ಮುಂತಾದ ಮೂಲಭೂತ ಸೌಕರ್ಯಗಳ ಬಗ್ಗೆ ಪರ ವಿರೋಧ ಚರ್ಚೆಗಳು ತಲಪಾಡಿ ಗ್ರಾಮ ಸಭೆಯಲ್ಲಿ ನಡೆಯಿತು

ತಲಪಾಡಿ ಗ್ರಾಮ ಪಂಚಾಯತ್ ನ 2023-24 ನೇ‌ ಸಾಲಿನ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಕೆಸಿರೋಡ್ ರವರ ಅಧ್ಯಕ್ಷತೆಯಲ್ಲಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಭವನದಲ್ಲಿ ಸೋಮವಾರ ನಡೆದ ಪ್ರಥಮ ಹಂತದ ಗ್ರಾಮ ಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು,ಈಗಿರುವ ಅಬಕಾರಿ ಇಲಾಖೆ ಕಚೇರಿ ಬಳಿ ನೀರಿನ ಮೂಲ ಇವೆ. ನಮಗೆ ಕುಡಿಯುವ ನೀರು ಬೇಕು.ಅಬಕಾರಿ ಇಲಾಖೆ ಗೆ ಬೇರೆ ಜಾಗ ಕೊಡಿ, ನಮಗೆ ಕುಡಿಯುವ ನೀರು ಒದಗಿಸಿ ಕೊಡಿ ಎಂದು ಒತ್ತಾಯಿಸಿದರು.

ತಲಪಾಡಿ ಬಳಿ ವಾಹನಗಳ ಪಾರ್ಕಿಂಗ್ ಆಗುತ್ತಿರುವ ಬಗೆ ಗ್ರಾಮಸ್ಥರೊಬ್ಬರು ಪ್ರಸ್ತಾಪಿಸಿ,ಘನ ವಾಹನಗಳು ತಲಪಾಡಿ,ಕೆಸಿರೋಡ್ ಪರಿಸರದ ರಸ್ತೆ ಬದಿ ಪಾರ್ಕಿಂಗ್ ಮಾಡುತ್ತಿದ್ದು, ಇದರಿಂದ ಅಪಘಾತ ಗಳು ಸಂಭವಿಸುತ್ತದೆ. ಸಂಚಾರಕ್ಕೂ ತೊಂದರೆ ಆಗುತ್ತದೆ . ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನಹರಿಸುವಂತೆ ಒತ್ತಾಯಿಸಿದರು.

ಅಲ್ಲದೇ ತಲಪಾಡಿ ಗ್ರಾಮ ವ್ಯಾಪ್ತಿಯಲ್ಲಿ ಕಾಮಗಾರಿ ಆಗಿಲ್ಲ.ಆಗಿರುವ ಕಾಮಗಾರಿ ಕಳಪೆ ಆಗಿವೆ.ಎಂಜಿನಿಯರ್ ಇಲ್ಲದೇ ಕಾಮಗಾರಿ ಮಾಡಲಾಗಿದೆ ಎಂದು ಈ ಸಂದರ್ಭದಲ್ಲಿ ಆರೋಪಿಸಿದರು.

ಕೆಲವು ಕಡೆ ಕಾಂಪೌಂಡ್ ಚರಂಡಿ ಗೆ ಸಮಾನ ಆಗಿ ನಿರ್ಮಿಸುತ್ತಿದ್ದಾರೆ.ಇದರಿಂದ ಮಳೆ ನೀರು ಹರಿದು ಹೋಗಲು ಜಾಗ ಇರುವುದಿಲ್ಲ .ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಪಿಡಿಒ ಕೇಶವ ಅವರು ಕಾಂಪೌಂಡ್ ಚರಂಡಿ ಗೆ ಸಮಾನ ಆಗಿ ನಿರ್ಮಾಣ ಆಗುವ ಸಂದರ್ಭ ನಮ್ಮ ಗಮನ ಹರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು

ತಲಪಾಡಿ ಗ್ರಾಮ ವ್ಯಾಪ್ತಿಯಲ್ಲಿ ತಂಗುದಾಣ ಇಲ್ಲ.ಮಳೆಗೆ , ಬಿಸಿಲಿಗೆ ಪ್ರಯಾಣಿಕರು ಸಂಕಷ್ಟ ದಿಂದ ಬಸ್ ಕಾಯಬೇಕಾಗಿದೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು.ನಿಮ್ಮಿಂದ ಆಗದಿದ್ದರೆ ಮಹಿಳೆಯರಾದ ನಾವು ಹಣ‌ಸಂಗ್ರಹ ಮಾಡಿ ಬಸ್ ತಂಗುದಾಣ ನಿರ್ಮಿಸುತ್ತೇವೆ ಎಂದು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪಿಡಿಒ ಅವರು ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗಮನಹರಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ನೋಡೆಲ್ ಅಧಿಕಾರಿಯಾಗಿ ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣ ಇಲಾಖೆ ಸಮನ್ವಯ ಅಧಿಕಾರಿ ಜೇಮ್ಸ್ ಕುಟ್ಟಿನ್ನ ಕಾರ್ಯ ನಿರ್ವಹಿಸಿದರು.

ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ನಡೆಸಿದರು. ಪಿಡಿಒ ಕೇಶವ ಗ್ರಾಮ ಪಂಚಾಯತ್ ನಿಂದ ಸಿಗುವ ‌ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಕಾರ್ಯದರ್ಶಿ ನಿರ್ಣಯ ಮಂಡನೆ ಮಾಡಿದರು.

,ಉಪಾಧ್ಯಕ್ಷ ಪುಷ್ಪಾವತಿ ಶೆಟ್ಟಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X