ಉಳ್ಳಾಲ | ತೆಂಗಿನಮರದಿಂದ ಬಿದ್ದು ಮೂರ್ತೆದಾರ ಮೃತ್ಯು

ಉಳ್ಳಾಲ: ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೂರ್ತೆದಾರರೊಬ್ಬರು ಮೃತಪಟ್ಟಿರುವ ಘಟನೆ ಕೊಲ್ಯ ಕನೀರು ತೋಟ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಕೊಲ್ಯ ಕನೀರು ತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ(46) ಮೃತಪಟ್ಟ ಮೂರ್ತೆದಾರ.
ಯಶೋಧರ ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ,ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
Next Story





