Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಮಾರುತಿ ಮಾಣಿಕ್ಯ ಸಮಾರೋಪ...

ಉಳ್ಳಾಲ: ಮಾರುತಿ ಮಾಣಿಕ್ಯ ಸಮಾರೋಪ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Dec 2025 8:50 PM IST
share
ಉಳ್ಳಾಲ: ಮಾರುತಿ ಮಾಣಿಕ್ಯ ಸಮಾರೋಪ ಕಾರ್ಯಕ್ರಮ

ಮಂಗಳೂರು: ಉಳ್ಳಾಲ ಮೊಗವೀರಪಟ್ಣ ಮಾರುತಿ ಜನಸೇವಾ ಸಂಘ, ಮಾರುತಿ ಯುವಕ ಮಂಡಲದ 40ನೇ ವರ್ಷದ ಆಚರಣೆಯ ಒಂದು ವರ್ಷದ ಸಮಾಜಮುಖಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಪುರಭವನದಲ್ಲಿ ಗುರುವಾರ ಮಾರುತಿ ಮಾಣಿಕ್ಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮೊಗವೀರರು ಸಮುದ್ರವನ್ನು ನಂಬಿಕೊಂಡ ಸಾಹಸಿಗರು. ಧಾರ್ಮಿಕ ಕಾರ್ಯಗಳನ್ನು ಹಾಗೂ ಸೌಹಾರ್ದಮಯ ವಾತಾವರಣ ನಿರ್ಮಿಸುವ ನೆಲೆಯಲ್ಲಿ ಮೊಗವೀರರ ಪಾತ್ರ ಅಪಾರವಾಗಿದೆ. ಅದರಲ್ಲೂ ಮಾರುತಿ ಜನಸೇವಾ ಸಂಘ, ಮಾರುತಿ ಯುವಕ ಮಂಡಲ ಸಮಾಜದ ಶ್ರೇಯಸ್ಸಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಶಾಸಕ ಯಶ್‌ಪಾಲ್ ವಿ. ಸುವರ್ಣ ಮಾತನಾಡಿ, ಶಾಸಕ ವೇದವ್ಯಾಸ ಕಾಮತ್ ಶುಭ ಹಾರೈಸಿದರು. ರಾಜ್ಯ ಅಲೈಡ್ ಹೆಲ್ತ್ ಕೌನ್ಸಿಲ್ ಚೇರ್‌ಮನ್ ಡಾ. ಯು.ಟಿ. ಇಫ್ತಿಕಾರ್, ಮೆಟಲ್ ಗ್ರೂಫ್ ಆಫ್ ಕಂಪೆನೀಸ್ ಬಹರೈನ್ ಚೇರ್‌ಮನ್ ಅಬ್ದುಲ್ ರಝಾಕ್, ಮೊಗವೀರ ಬಹರೈನ್ ಅಧ್ಯಕ್ಷ ಶಿಲ್ಪಾಶಮಿತ್ ಕುಂದರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಉದ್ಯಮಿಗಳಾದ ಎಚ್.ಎಸ್. ನಿಸಾರ್, ಸಿಂಧೂರಾಮ್ ಎ. ಪುತ್ರನ್, ಉಡುಪಿಯ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್, ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಕ್ರೀಡಾಪಟು ಸಹನಾ ಕುಮಾರಿ, ಟೆನಿಸ್ ಬಾಲ್ ಕ್ರಿಕೆಟ್ ಅಕಾಡಮಿಯ ಪ್ರಮುಖರಾದ ಗೌತಮ್ ಶೆಟ್ಟಿ, ಶರತ್ ಶೆಟ್ಟಿ ಪಡುಬಿದ್ರಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು.

*ವಿವಿಧ ಕ್ಷೇತ್ರದ ಸಾಧಕರಾದ ಧನಲಕ್ಷ್ಮಿ ಪೂಜಾರಿ, ರವಿಶಂಕರ್ ವಳಕುಂಜ, ದೀಪಾಶ್ರೀ ಎಸ್., ರೆಮೋನಾ ಇವೆಟ್ ಪಿರೇರಾ, ಪ್ರಮೀಳಾ ದೀಪಕ್ ಪೆರ್ಮುದೆ, ಶಮ್ಮಿ ಗಫೂರ್ ಪಡುಬಿದ್ರಿ, ವಿದ್ಯಾ ಸಂಪತ್ ಕರ್ಕೇರ ಅವರಿಗೆ ಮಾರುತಿ ಮಾಣಿಕ್ಯ ಸಾಧಕ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಮುಖರಾದ ಅಬ್ದುಲ್ ರಝಾಕ್ ಹೆಜಮಾಡಿ, ಪ್ರಶಾಂತ್ ಅಂಬಲಪಾಡಿ, ಚೇತನ್ ಬೆಂಗ್ರೆ, ಜಾನಕಿ ಪುತ್ರನ್, ವಿದ್ಯಾ ಸಂಪತ್ ಕರ್ಕೇರ, ನಾಗೇಶ್ ರಾವ್ ಅವರನ್ನು ಅಭಿನಂದಿಸಲಾಯಿತು.

*ಕಾರ್ಯಕ್ರಮದಲ್ಲಿ 250 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ವೆಚ್ಚದಲ್ಲಿ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಮಂಕಿಸ್ಟಾಂಡ್ ಬಳಿಯ ಮಾರುತಿ ಆಸರೆ ಮನೆ ಹಾಗೂ ಉಳ್ಳಾಲ ಉಳಿಯದ ಮಾರುತಿ ಆಶ್ರಯದ ಕರಾರು ಪತ್ರ ಹಸ್ತಾಂತರ, 16 ಪಟ್ನ ಸಂಯುಕ್ತ ಸಭಾದ ಗುರಿಕಾರರಿಗೆ ಸನ್ಮಾನ, ಗೌರವ ಸಮರ್ಪಣೆ ನೆರವೇರಿತು.

ಮಾರುತಿ ಜನಸೇವಾ ಸಂಘ ಮತ್ತು ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ, ಅಧ್ಯಕ್ಷ ಸಂದೀಪ್ ಪುತ್ರನ್, ಪ್ರಧಾನ ಸಂಚಾಲಕ ಸುಧೀರ್ ವಿ.ಅಮೀನ್, ಪ್ರಧಾನ ಕಾರ್ಯದರ್ಶಿ ಕಪಿಲ್ ಎಸ್. ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಬಿ. ಉಳ್ಳಾಲ್, ಕಿರಣ್ ಪುತ್ರನ್, ಕೋಶಾಧಿಕಾರಿ ಅನಿಲ್‌ಚರಣ್, ಕಾರ್ಯದರ್ಶಿ ಪವನ್ ಉಳ್ಳಾಲ್, ಕ್ರೀಡಾ ಕಾರ್ಯದರ್ಶಿ ಮಹೇಶ್ ಸಾಲ್ಯಾನ್, ಜತೆ ಕಾರ್ಯದರ್ಶಿ ಪುನೀತ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಆರ್‌ಜೆ ಪ್ರಸನ್ನ, ಮಧುರಾಜ್, ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X