Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: ಲೋಕಾಯುಕ್ತ ಆಧಿಕಾರಿಗಳಿಂದ...

ಉಳ್ಳಾಲ: ಲೋಕಾಯುಕ್ತ ಆಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ8 Nov 2023 3:41 PM IST
share
ಉಳ್ಳಾಲ: ಲೋಕಾಯುಕ್ತ ಆಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಉಳ್ಳಾಲ, ನ.8: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಉಳ್ಳಾಲ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಉಳ್ಳಾಲ ನಗರಸಭೆಯಲ್ಲಿ ಜನನ-ಮರಣ ಪ್ರಮಾಣ ಪತ್ರ, ಉದ್ದಿಮೆ, ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಆಗುತ್ತಿದೆ. ನಗರಸಭೆಗೆ ಖಾಯಂ ಪೌರಾಯುಕ್ತರನ್ನು ನೇಮಿಸಬೇಕು ಇತ್ಯಾದಿ ಬೇಡಿಕೆ, ಸಮಸ್ಯೆಗಳ ಅಹವಾಲನ್ನು ಸಭೆಯಲ್ಲಿ ಹಾಜರಿದ್ದ ವಿವಿಧ ಸಂಘಟನೆಗಳ ಸದಸ್ಯರು, ಕೌನ್ಸಿಲರ್ ಗಳು ಅಧಿಕಾರಿಗಳ ಮುಂದಿಟ್ಟರು. ಅವುಗಳಿಗೆ ಉತ್ತರಿಸಿದ ಲೋಕಾಯುಕ್ತ ಅಧಿಕಾರಿಗಳು, ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಮನವಿ ಅರ್ಪಿಸಿತು. ಯುಜಿಡಿ ಸಮಸ್ಯೆ ಶೀಘ್ರ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಉಳ್ಳಾಲ ಮುಸ್ಲಿಮ್ ಒಕ್ಕೂಟದ ಸದಸ್ಯರು ಮನವಿ ಅರ್ಪಿಸಿದರು.

ಅಹವಾಲು ಸ್ವೀಕರಿಸಿ ಪರಿಶೀಲಿಸಿದ ಬಳಿಕ ನಗರಸಭೆ ಸಿಬ್ಬಂದಿಯೊಂದಿಗೆ ಮಾತನಾಡಿದ ಲೋಕಾಯುಕ್ತ ಅಧಿಕಾರಿಗಳು, ಭ್ರಷ್ಟಾಚಾರದ ದೂರುಗಳು ಬರಬಾರದು, ಈ ಬಗ್ಗೆ ಜಾಗೃತಿ ವಹಿಸಬೇಕು. ಈಗಾಗಲೇ ಕೆಲವರು ಬಾಕಿ ಉಳಿದ ರಸ್ತೆ, ಚರಂಡಿ ಕಾಮಗಾರಿ, ಯುಜಿಡಿ ಸಮಸ್ಯೆ ಬಗೆ ದೂರು ನೀಡಿದ್ದಾರೆ. ಈ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ಒಟ್ಟು 20 ಅಹವಾಲುಗಳನ್ನು ಸಲ್ಲಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್, ಸಿಬ್ಬಂದಿಯಾದ ಮಹೇಶ್, ರಾಜಪ್ಪ, ವಿನಾಯಕ, ಗಂಗಣ್ಣ, ರುದ್ರೇಗೌಡ, ವಿವೇಕ್, ಪಂಪಣ್ಣ, ನಗರಸಭೆ ಸಿಬ್ಬಂದಿ, ನಗರಸಭೆ ಕೌನ್ಸಿಲರ್ ಗಳು, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತಡಿ, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ ಮಯ್ಯ, ಉಳ್ಳಾಲ ಮುಸ್ಲಿಮ್ ಒಕ್ಕೂಟ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಉಳ್ಳಾಲ ನಾಗರಿಕ ವೇದಿಕೆ ಸಂಘಟನೆ ಸದಸ್ಯರು‌ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X