ಉಳ್ಳಾಲ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ದರ್ಗಾ ಸಮಿತಿ ಆಗ್ರಹ

ಉಳ್ಳಾಲ : ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ದಾಳಿ ನಡೆಸಿ ಒಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಶೀಘ್ರ ಬಂಧಿಸುವಂತೆ ಉಳ್ಳಾಲ ದರ್ಗಾ ಸಮಿತಿ ಒತ್ತಾಯಿಸಿದೆ.
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ತಂಡವೊಂದು ಕೊಲೆಗೈದಿರುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿ ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆಗಳಿಂದ ಶಾಂತಿ ಹದಗೆಟ್ಟು ಸಮಾಜಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗುತ್ತದೆ.
ಈ ವಿಚಾರದಲ್ಲಿ ಪೊಲೀಸರು ನ್ಯಾಯಯುತವಾಗಿ ಕ್ರಮ ಕೈಗೊಂಡರೆ ಈ ರೀತಿಯ ಹತ್ಯೆಗಳು ಮರುಕಳಿಸದಂತೆ ನೋಡಿ ಕೊಳ್ಳಬಹುದು ಎಂದು ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
Next Story





