ಉಳ್ಳಾಲ | ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈ ಭಾರತ್ ದಕ್ಷಿಣ ಕನ್ನಡ, ಯುವಜನ ಒಕ್ಕೂಟ, ಗ್ರಾಮ ಪಂಚಾಯತ್ ಕೊಣಾಜೆ, ಸಮರ್ಪಣಾ ಪರಿವಾರ ಸೇವಾ ಟ್ರಸ್ಟ್ (ರಿ) ಮಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ಅಸೈಗೋಳಿ ಖಾಸಗಿ ಸಭಾಂಗಣದಲ್ಲಿ ನಡೆಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದಾಮೋದರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಗಿ ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು ಯಚ್. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಶಹೀದ್ ಟಿ.ಕೆ.ತೆಕ್ಕಿಲ್, ಬಂಟರ ಸಂಘ ಉಳ್ಳಾಲ ಅಧ್ಯಕ್ಷ ರವೀಂದ್ರ ರೈ ಕಳ್ಳಿಮಾರ್, ಮಂಗಳಾ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಎ. ಕೆ ಅಬ್ದುಲ್ ರಹ್ಮಾನ್ ಕೊಡಿಜಾಲ್, ಲಯನ್ಸ್ ಕ್ಲಬ್ ಕುಡ್ಲ ಅಧ್ಯಕ್ಷ ಅಬ್ದುಲ್ ರಝಾಕ್, ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕ ರಜನಿ, ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್ ಮತ್ತಿತರರು ಉಪಸ್ಥಿತರಿದ್ದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ ಪ್ರಸ್ತಾವನೆಗೈದರು. ಸಮರ್ಪಣಾ ಪಾರಿವಾರ್ ಟ್ರಸ್ಟ್(ರಿ) ಮಂಗಳೂರು ಇದರ ಉಪಾಧ್ಯಕ್ಷ ವಸಂತ್ ಕೋಡಿ ವಂದಿಸಿದರು. ಯುವಜನೋತ್ಸವ ನೋಡಲ್ ಅಧಿಕಾರಿ ಮೋಹನ್ ಶಿರ್ಲಾಲ್ ನಿರೂಪಿಸಿದರು.







