Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ | ಪ.ಪಂ. ಸಾಮಾನ್ಯ ಸಭೆಯಲ್ಲಿ...

ಉಳ್ಳಾಲ | ಪ.ಪಂ. ಸಾಮಾನ್ಯ ಸಭೆಯಲ್ಲಿ ಅಸಮರ್ಪಕ ಪೈಪ್ ಲೈನ್ ಕಾಮಗಾರಿಯ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ29 May 2025 8:20 PM IST
share
PHOTO OF Meeting

ಉಳ್ಳಾಲ : ಅಮೃತ್ 2.0 ಕುಡಿಯುವ ನೀರು ಯೋಜನೆ ಅಸಮರ್ಪಕ ಪೈಪ್ ಲೈನ್ ಕಾಮಗಾರಿ ಬಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಶ್ರೀಕಾಂತ್ ರನ್ನು ತರಾಟೆ ತೆಗೆದುಕೊಂಡ ಘಟನೆ ಕೋಟೆಕಾರ್ ಪ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.

ಕೋಟೆಕಾರ್ ಪ.ಪಂ. ಅಧ್ಯಕ್ಷ ದಿವ್ಯ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಸುಜಿತ್ ಮಾಡೂರು ಅವರು, ಕುಡಿಯುವ ನೀರಿನ ಕಾಮಗಾರಿಯನ್ನು ಸಮರ್ಪಕವಾಗಿ ಮಾಡಿ. ಕೆಲವು ಕಡೆ ರಸ್ತೆ ಅಗೆದು ಹಾಗೆ ಬಿಟ್ಟಿದ್ದೀರಿ. ಈ ರೀತಿ ಮಾಡುವುದು ಬೇಡ ಎಂದರು. ಇದಕ್ಕೆ ಧ್ವನಿ ಗೂಡಿಸಿದ ಕೌನ್ಸಿಲರ್ ಅಹ್ಮದ್ ಅಜ್ಜಿನಡ್ಕ ಅವರು ಒಂದು ವಾರ್ಡ್ ನ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಇನ್ನೊಂದು ವಾರ್ಡ್ ನ ಕಾಮಗಾರಿ ಮಾಡಿ ಎಂದರು. ಇದೇ ವೇಳೆ ಸದಸ್ಯ ಹರೀಶ್ ಅವರು ಎಲ್ಲಾ ಮನೆಗಳಿಗೆ ಪೈಪ್ ಲೈನ್ ಕಾಮಗಾರಿ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿ ತರಾಟೆಗೈದರು.

ಅಧ್ಯಕ್ಷ ದಿವ್ಯ ಸತೀಶ್ ಮಾತನಾಡಿ, ಅರ್ಧಂಬರ್ಧ ಕಾಮಗಾರಿ ಮಾಡುವುದು ಬೇಡ. ಒಂದೆಡೆ ಆರಂಭಿಸಿದ ಕಾಮಗಾರಿ ಪೂರ್ಣ ಆದ ಬಳಿಕ ಇನ್ನೊಂದು ವಾರ್ಡ್ ನ ಕಾಮಗಾರಿ ಆರಂಭಿಸಿ. ಪೈಪ್ ಲೈನ್ ಅನ್ನು ಅಗೆದು ಚರಂಡಿ ಮುಚ್ಚುವುದು ಬೇಡ. ಕಾಮಗಾರಿ ಆದ ಬಳಿಕ ಕಾಂಕ್ರೀಟ್ ನಿಂದ ಹೊಂಡ ಮುಚ್ಚಬೇಕು ಎಂದು ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಶ್ರೀಕಾಂತ್ ಅವರು, ಮಳೆಗಾಲದಲ್ಲಿ ‌ಹೊಂಡ ಮುಚ್ಚಲು ಕಷ್ಟಕರವಾಗುತ್ತದೆ. ಆಕ್ಷೇಪ ಇದ್ದ ಮನೆಗಳಿಗೆ ಮಾತ್ರ ಪೈಪ್ ಲೈನ್ ಕಾಮಗಾರಿ ಮಾಡಿಲ್ಲ. ಉಳಿದ ಮನೆಗಳಿಗೆ ಸಂಪರ್ಕ ನೀಡಲಾಗುವುದು. ಜನವರಿ ತಿಂಗಳಿಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರು ಹಾಜರಿ ಬಗೆ ಸಭೆಯಲ್ಲಿ ಪ್ರಸ್ತಾಪಿಸಿದ ಸುಜಿತ್ ಮಾಡೂರು ಅವರು, ಇಲಾಖಾಧಿಕಾರಿಗಳು ಗೈರು ಆದರೆ ಸಮಸ್ಯೆಗಳನ್ನು ಯಾರಲ್ಲಿ ಚರ್ಚಿಸಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಕೌನ್ಸಿಲರ್ ಅಹ್ಮದ್ ಅಜ್ಜಿನಡ್ಕ ಮನೆಹಾನಿ, ಪರಿಹಾರ ಬಗೆ ಚರ್ಚಿಸಲು ಗ್ರಾಮಕರಣಿಕರು ಬೇಕು ಎಂದರು.

ಸದಸ್ಯರ ಒತ್ತಡ ಮೇರೆಗೆ ಸಭೆಗೆ ಹಾಜರಾದ ಗ್ರಾಮಕರಣಿಕ ನವ್ಯ ಅವರು, ಮನೆಹಾನಿ ಹಾಗೂ ಪರಿಹಾರ ಮೊತ್ತದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

15ನೇ ಹಣಕಾಸು ಯೋಜನೆಯಡಿ ಐವರು ಮುಸ್ಲಿಮರು ಕೌನ್ಸಿಲರ್ ಗಳ ವಾರ್ಡ್ ಗಳಿಗೆ ಅನುದಾನ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಹ್ಮದ್ ಅಜ್ಜಿನಡ್ಕ ಅವರು, ಅನುದಾನ ನೀಡುವುದರಲ್ಲಿ ಸಮಾನತೆ ಪಾಲಿಸಿ. ಎಲ್ಲಾ ವಾರ್ಡ್ ಗಳಿಗೆ ಅನುದಾನ ನೀಡಿ ಐದು ವಾರ್ಡ್ ಗಳನ್ನು ‌ಕಡೆಗಣಿಸಿರುವುದಕ್ಕೆ‌ ನಮ್ಮ ಆಕ್ಷೇಪ ಇದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ದಿವ್ಯ ಸತೀಶ್ ಅವರು, ಐದು ವಾರ್ಡ್ ಗಳಿಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಕೋಟೆಕಾರ್ ಪ.ಪಂ.ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಆವರಣ ಗೋಡೆ, ಸಿ.ಸಿ.ಟಿವಿ ಅಳವಡಿಕೆ ಕಾಮಗಾರಿಯನ್ನು ಪ.ಪಂ.ಉದ್ಯಮ ನಿಧಿಯಡಿ ನಿರ್ವಹಿಸಲು ‌15 ಲಕ್ಷ ರೂ. ಮಂಜೂರು ಮಾಡುವ ಬಗ್ಗೆ ಅಧ್ಯಕ್ಷ ದಿವ್ಯ ಸತೀಶ್ ಸಭೆಯಲ್ಲಿ ಪ್ರಸ್ತಾಪಿಸಿದಾಗ ಸಹಮತ ವ್ಯಕ್ತಪಡಿಸಿದ ಸದಸ್ಯರು ಕಾಮಗಾರಿಗೆ ಪ.ಪಂ.ಹೆಸರು ಇಡಬೇಕು ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮುಖ್ಯಾಧಿಕಾರಿ ಮಾಲಿನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X