Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ | ಎ.29 ರಂದು ದೇರಳಕಟ್ಟೆ...

ಉಳ್ಳಾಲ | ಎ.29 ರಂದು ದೇರಳಕಟ್ಟೆ ಜಂಕ್ಷನ್‌‌ನಲ್ಲಿ ಹಕ್ಕೊತ್ತಾಯ ಸಮಾವೇಶ : ಸುನಿಲ್ ಕುಮಾರ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ19 April 2025 1:28 PM IST
share
Photo of Press meet

ಉಳ್ಳಾಲ : ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಜನರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎ.29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌‌ನಲ್ಲಿ ಸಿಪಿಎಂ ಉಳ್ಳಾಲ ವಲಯ ಸಮಿತಿ ವತಿಯಿಂದ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ.

ಈ ಸಮಾವೇಶವನ್ನು ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಸಿಪಿಎಂ ಉಳ್ಳಾಲ ವಲಯ ಸಮಿತಿ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ‌‌.

ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದ ಪೂರ್ವಭಾವಿಯಾಗಿ ಎ.29 ರಂದು ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟಿಕಲ್ ಜಂಕ್ಷನ್‌ನಿಂದ ಎರಡು ಬೃಹತ್ ರ್‍ಯಾಲಿಗಳು ಹೊರಡಲಿದೆ ಎಂದು ಹೇಳಿದರು.

ಉಳ್ಳಾಲ ತಾಲೂಕು ರಚನೆಯಾಗಿ ಐದು ವರ್ಷವಾದರೂ ಪ್ರಮುಖವಾಗಿ ಬೇಕಾದ ಸುಸಜ್ಜಿತವಾದ ಮಿನಿ ವಿಧಾನಸೌಧ, ಸಬ್ ರಿಜಿಸ್ಟ್ರಾರ್ ಕಚೇರಿ, ತಾಲೂಕು ಕಟ್ಟಡ ಕ್ರೀಡಾಂಗಣ, ವ್ಯವಸ್ಥಿತ ರಂಗ ಮಂದಿರ, ಪುರಭವನ, ತಾಲೂಕು ನ್ಯಾಯಾಲಯದ ವ್ಯವಸ್ಥೆ ಆಗಬೇಕು ಎಂಬ ಬೇಡಿಕೆ ಇಡಲಾಗುವುದು ಎಂದು ಹೇಳಿದರು.

ಹಕ್ಕೊತ್ತಾಯದ ಸಮಾವೇಶ ಸಂದೇಶವನ್ನು ಮನೆಮನೆಗೆ ತಲುಪಿಸಲು ಈಗಾಗಲೇ 150ರಷ್ಟು ತಂಡಗಳು ರಚಿಸಲಾಗಿದ್ದು ,ಎರಡು ದಿನಗಳ ಕಾಲ ಉಳ್ಳಾಲ ತಾಲೂಕಿನಾದ್ಯಂತ ವಾಹನ ಪ್ರಚಾರ ಜಾಥಾ ನಡೆಯಲಿದೆ .ಎ.21ರಂದು ಬೆಳಿಗ್ಗೆ 9.30ಕ್ಕೆ ಮುಡಿಪು ಜಂಕ್ಷನ್‌ನಲ್ಲಿ ಈ ಜಾಥಾ ವನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಲಿದ್ದು, ಸಂಜೆ 6ಕ್ಕೆ ಹರೇಕಳ ಕಡವಿನ ಬಳಿಯಲ್ಲಿ ಸಮಾರೋಪ ನಡೆಯಲಿದೆ. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೃಷ್ಣಪ್ಪ ಕೊಂಚಾಡಿ ಸಮಾರೋಪ ಭಾಷಣ ಮಾಡಲಿದ್ದಾರೆ.

ಎ.22ರ ಬೆಳಿಗ್ಗೆ 9.30ಕ್ಕೆ ಕುತ್ತಾರ್ ಜಂಕ್ಷನ್‌ನಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿಯವರು ಉದ್ಘಾಟಿಸಲಿದ್ದು, ಸಂಜೆ 5.30ಕ್ಕೆ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಬಜಾಲ್‌ ಸಮಾರೋಪ ಭಾಷಣ ಮಾಡಲಿದ್ದಾರೆ. ಎರಡು ದಿನಗಳ ಕಾಲ ಸುಮಾರು 25ರಷ್ಟು ಸ್ಥಳಗಳಲ್ಲಿ ಜಾಥಾ ಕಾರ್ಯಕ್ರಮವು ಜರುಗಲಿದ್ದು, ಪಕ್ಷದ ಜಿಲ್ಲಾ ನಾಯಕರಾದ ಬಿ.ಎಂ.ಭಟ್, ಜಯಂತಿ ಶೆಟ್ಟಿ, ಬಿ.ಕೆ.ಇಮ್ತಿಯಾಝ್, ಯೋಗೀಶ್ ಜಪ್ಪಿನಮೊಗರು, ಮನೋಜ್ ವಾಮಂಜೂರು, ಜೆ. ಬಾಲಕೃಷ್ಣ ಶೆಟ್ಟಿ, ಈಶ್ವರೀ ಬೆಳ್ತಂಗಡಿಯವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿ ಗೋಷ್ಠಿ ಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುಕುಮಾ‌ರ್ ತೊಕ್ಕೊಟ್ಟು, ಹಿರಿಯ ನಾಯಕ ಕೃಷ್ಣಪ್ಪ ಸಾಲ್ಯಾನ್ ಮುಡಿಪು ವಲಯ ಕಾರ್ಯದರ್ಶಿ ರಫೀಕ್ ಹರೇಕಳ , ದ.ಕ. ಜಿಲ್ಲಾ ಸಮಿತಿ ಸದಸ್ಯರಾದ ಶೇಖರ್ ಕುಂದರ್, ಮುಡಿಪು ವಲಯ ಸಮಿತಿ ಸದಸ್ಯರಿಝಾನ್ ಹರೇಕಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X