ಯುನಿವೆಫ್ : ಕೃಷ್ಣಾಪುರದಲ್ಲಿ ಸೀರತ್ ಸಮಾವೇಶ

ಮಂಗಳೂರು, ನ.29: ಯುನಿವೆಫ್ ಕರ್ನಾಟಕವು ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಸೀರತ್ ಸಮಾವೇಶವು ಕೃಷ್ಣಾಪುರದ ಪ್ಯಾರಡೈಸ್ ಗ್ರೌಂಡ್ ಬಳಿ ಇರುವ ಅಲಿಯಾ ಮಾಲ್ ಎದುರುಗಡೆ ಜರಗಿತು.
ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತುದಾರ ಶಫೀಕ್, ಮುಡಾ ಸದಸ್ಯ ಅಬ್ದುಲ್ ಜಲೀಲ್, ಅನಿವಾಸಿ ಉದ್ಯಮಿ ಉಮರ್ ಫಾರೂಕ್ ದುಬೈ, ಸುರತ್ಕಲ್ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ ಭಾಗವಹಿಸಿದ್ದರು.
ಅಭಿಯಾನ ಸಂಚಾಲಕ ಯು.ಕೆ.ಖಾಲಿದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ಸೈಫುದ್ದೀನ್ ಕಾರ್ಯಕ್ರಮ ನಿರೂಪಿಸಿದರು.
Next Story





