ಉಪ್ಪಿನಂಗಡಿ: ಬ್ಯಾಂಕ್ ಪ್ರಬಂಧಕ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17 ರಿಂದ ನಾಪತ್ತೆಯಾಗಿರುವುದಾಗಿ ಅವರ ಸಹೋದರ ದೂರು ನೀಡಿದ್ದಾರೆ.
ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯವನ್ನು ಹೊಂದಿದ್ದ ಸುಬ್ರಹ್ಮಣ್ಯಂ ಡಿ. 17 ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಪತ್ತೆಯಾಗಿರುವುದಿಲ್ಲವೆಂದೂ, ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದ್ದು, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





