Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ನದಿಯಲ್ಲಿ ತೇಲಿ...

ಉಪ್ಪಿನಂಗಡಿ: ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ; ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಪ್ರವಾಹ ರಕ್ಷಣಾ ತಂಡ

ವಾರ್ತಾಭಾರತಿವಾರ್ತಾಭಾರತಿ26 July 2024 2:47 PM IST
share
ಉಪ್ಪಿನಂಗಡಿ: ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ; ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಪ್ರವಾಹ ರಕ್ಷಣಾ ತಂಡ

ಉಪ್ಪಿನಂಗಡಿ: ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದ ಘಟನೆ ಉಪ್ಪಿನಂಗಡಿಯಲ್ಲಿ ಶುಕ್ರವಾರ ನಡೆದಿದೆ.

ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ನಿನ್ನೆಗಿಂತಲೂ ಏರಿಕೆಯಾಗಿದ್ದು, 28.05 ಮೀ. ಎತ್ತರದಲ್ಲಿ ಹರಿಯುತ್ತಿತ್ತು. ನದಿಯು ರಭಸದಿಂದ ಹರಿಯುತ್ತಿದ್ದು, ಈ ನದಿಯ ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ನೋಡಿದ ಹಳೆಗೇಟು ಬಳಿಯ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದರು.

ತಕ್ಷಣವೇ ಕಾರ್ಯಪ್ರವೃತವಾದ ಈ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ ಮೂಲಕ ತೆರಳಿ ದನದ ಮೂಗುದಾರಕ್ಕೆ ಹಗ್ಗವನ್ನು ಕಟ್ಟಿ ದಡಕ್ಕೆ ತಂದು ಕಟ್ಟಿ ಹಾಕಿದರು.

ಗೃಹ ರಕ್ಷಕದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಬಿ. ಅವರ ನೇತೃತ್ವದ ಈ ರಕ್ಷಣಾ ಕಾರ್ಯಾಚರಣ ತಂಡದಲ್ಲಿ ಎ.ಎಸ್.ಎಲ್. ಜನಾರ್ದನ, ಚರಣ್, ಸುದರ್ಶನ್, ಹಾರೀಸ್, ಸಮದ್ ಇದ್ದರು.

ಸಾರ್ವಜನಿಕರಿಂದ ಪ್ರಶಂಸೆ: ರಭಸದಿಂದ ಹರಿಯುವ ನದಿ ನೀರಿನಲ್ಲಿ ಜಾನುವಾರುಗಳ ರಕ್ಷಣೆ ಸುಲಭದ ಮಾತಲ್ಲ. ಅದನ್ನು ಹಿಡಿದುಕೊಳ್ಳಲು ಹೋದಾಗ ಅವುಗಳು ಬೆದರಿ ಆ ಕಡೆ, ಈಕಡೆ ಹಾರಲು, ಹೊರಳಾಡಲು ನೋಡುತ್ತವೆ. ಇದರಿಂದ ದೋಣಿಯೇ ಮಗುಚುವ ಸಂಭವವಿದೆ. ಆದರೂ ಇಂತಹ ಅಪಾಯದ ಪರಿಸ್ಥಿತಿಯಲ್ಲಿ ನದಿ ಮಧ್ಯದಿಂದ ದನವನ್ನು ರಕ್ಷಿಸಿ ತಂದ ಪ್ರವಾಹ ರಕ್ಷಣಾ ತಂಡವು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

26-07-1974ರ ಮಹಾನೆರೆ ಬಂದು ಈ ಬಾರಿಯ ಜುಲೈ 26ಕ್ಕೆ 50 ವರ್ಷವಾಗಿದೆ. ಆ ದಿನ ಕೂಡ ಶುಕ್ರವಾರವಾಗಿದ್ದು, ಆ ಸಂದರ್ಭ ಹಲವು ಕಷ್ಟ ನಷ್ಟಗಳು ಸಂಭವಿಸಿತ್ತಲ್ಲದೇ, ಹಲವು ಜಾನುವಾರುಗಳು ಕೊಚ್ಚಿ ಹೋಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X