ಉಪ್ಪಿನಂಗಡಿ: ಕಾರು ಢಿಕ್ಕಿ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಶಾಂತಿ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದ ಕಾರು – ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಪ್ರಭಾಕರ (40) ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಪ್ರಭಾಕರ ಅಡ್ಡೋಳೆ ಸಮೀಪದ ಪೇರಮಜಲು ನಿವಾಸಿ ಎಂದು ತಿಳಿದುಬಂದಿದ್ದು, ಇವರು ನೆಲ್ಯಾಡಿ ಯಿಂದ ಗುಂಡ್ಯದತ್ತ ಪ್ರಯಾಣಿಸುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಢಿಕ್ಕಿಯ ರಭಸಕ್ಕೆ ರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಪ್ರಭಾಕರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
Next Story





