ಉಪ್ಪಿನಂಗಡಿ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಮೃತ್ಯು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.12ರಂದು ನಡೆದಿದೆ.
ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೇ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ.
ಘಟನೆಯಾಗುವ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಅಸ್ವಸ್ಥಳಾದ ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಹರ್ಷಿತಾ ಮೃತಪಟ್ಟಿದ್ದಾರೆ.
ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ಈಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಹರ್ಷಿತಾಳ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.







