ಉಪ್ಪಿನಂಗಡಿ | ಟ್ಯಾಂಕರ್ ಪಲ್ಟಿ: ಚಾಲಕ ಪಾರು

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಡೀಸೆಲ್ ಸಾಗಾಟದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಗುರುವಾರ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಹಾಸನ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಗುಂಡ್ಯದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಿಂದ ಟ್ಯಾಂಕರ್ ಗೆ ಹಾನಿಯಾಗಿದೆ. ಟ್ಯಾಂಕರ್ ನಲ್ಲಿದ್ದ ಡೀಸಿಲ್ ಸೋರಿಕೆಗೆ ಒಳಗಾಗಿ ಒಂದಷ್ಟು ಇಂಧನ ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ.
ಅಪಘಾತ ಸಂಭವಿಸಿದ ವೇಳೆ ಟ್ಯಾಂಕರ್ ಹೆದ್ದಾರಿ ಬದಿಗೆ ಬಿದ್ದ ಕಾರಣ ಸಂಚಾರಕ್ಕೆ ಯಾವುದೇ ಅಡಚನೆಯಾಗಲಿಲ್ಲ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story





