UPSC ಮುಖ್ಯ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು, ಜೂ.13:ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಖಿಖಇ ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದೆ.
ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.inನಲ್ಲಿರುವ ಅರ್ಜಿ ನಮೂನೆಯನ್ನು ಪಡೆದು ಮಾರ್ಗಸೂಚಿಗಳ ಅನ್ವಯ ಜೂ.21ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ/ಹತ್ತಿರದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ/ಅಲ್ಪಸಂಖ್ಯಾತರ ಸಹಾಯವಾಣಿ ಸಂಖೈ: 8277799990ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





