Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೈಲು ಹಳಿಯಲ್ಲಿ ಕಲ್ಲುಗಳನ್ನಿಟ್ಟ...

ರೈಲು ಹಳಿಯಲ್ಲಿ ಕಲ್ಲುಗಳನ್ನಿಟ್ಟ ಪ್ರಕರಣ| ವೇದವ್ಯಾಸ ಕಾಮತ್ ಹೇಳಿಕೆ ಹಾಸ್ಯಾಸ್ಪದ ಎಂದ ಸದಾಶಿವ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ22 Oct 2024 9:28 PM IST
share
ರೈಲು ಹಳಿಯಲ್ಲಿ ಕಲ್ಲುಗಳನ್ನಿಟ್ಟ ಪ್ರಕರಣ| ವೇದವ್ಯಾಸ ಕಾಮತ್ ಹೇಳಿಕೆ ಹಾಸ್ಯಾಸ್ಪದ ಎಂದ ಸದಾಶಿವ ಉಳ್ಳಾಲ್

ಉಳ್ಳಾಲ: ತೊಕ್ಕೊಟ್ಟುವಿನ ರೈಲು ಹಳಿಗಳಲ್ಲಿ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರವು ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ‌.

ರೈಲ್ವೇ ಇಲಾಖೆ ಮಾತ್ರವಲ್ಲದೆ ರೈಲ್ವೇ ಪೊಲೀಸರು ಕೂಡ ಕೇಂದ್ರ ಸರಕಾರದ ಅಧೀನಕ್ಕೆ ಬರುತ್ತಾರೆಂಬ ಕನಿಷ್ಠ ಜ್ಞಾನವಿಲ್ಲದ ಶಾಸಕರು, ಕೂಲಂಕಷವಾಗಿ ತಿಳಿದು ಮಾತನಾಡಬೇಕು. ಉಳ್ಳಾಲ ಓವರ್ ಬ್ರಿಡ್ಜ್ ಸಮೀಪದ ಗಣೇಶ್ ನಗರ , ಕಾಪಿಕಾಡ್ ಬಳಿ ರೈಲ್ವೆ ಹಳಿಯಲ್ಲಿ ಕಲ್ಲುಗಳನ್ನಿಟ್ಟ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ.

ಅವರು ತೊಕ್ಕೊಟ್ಟಿನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಮಾತನಾಡಿ, ರೈಲ್ವೆ ಹಳಿಯಲ್ಲಿ ಕಲ್ಲು ಇಟ್ಟಿರುವ ದುಷ್ಕರ್ಮಿಗಳ ಕೃತ್ಯ ಖಂಡನೀಯ. ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಇದರ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಹುನ್ನಾರ ಸರಿಯಲ್ಲ ಎಂದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಸ್ಯ ಅಶ್ರಫ್ ಕೆ.ಸಿ ರೋಡ್ ಮಾತನಾಡಿ, "ರೈಲ್ವೇ ಅಧಿಕಾರಿಗಳ ಪ್ರಾಥಮಿಕ ತ‌ನಿಖಾ ವರದಿಯಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರ ಮಕ್ಕಳು ರೈಲ್ವೇ ಹಳಿಗಳಲ್ಲಿ ಕಲ್ಲುಗಳನ್ನು ಇಟ್ಟಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಆದರೆ ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ. ಬಿಜೆಪಿ ಅಧಿಕಾರದಲ್ಲಿರುವ ಹೊರ ರಾಜ್ಯಗಳಿಂದಲೇ ಹೆಚ್ಚಿನ ವಲಸೆ ಕಾರ್ಮಿಕರು ಇಲ್ಲಿಗೆ ಬರುತ್ತಿದ್ದಾರೆ. ಅವರ ಮಕ್ಕಳೇ ಹಳಿಗಳಲ್ಲಿ ಕಲ್ಲು ಇಟ್ಟಿರುವುದು ಎಷ್ಟು ಸತ್ಯವೆಂದು ಕೂಲಂಕುಷ ತನಿಖೆ ನಡೆಸಬೇಕು. ಇದೊಂದು ದೇಶದ್ರೋಹಿ ಕೃತ್ಯವೂ ಆಗಿರಬಹುದು. ಆದರೆ ಓರ್ವ ಜವಾಬ್ದಾರಿಯುತ ಶಾಸಕರು ಇಂತಹ ವಿಚಾರಗಳಲ್ಲಿ ಕಾಟಾಚಾರದ ರಾಜಕೀಯ ಹೇಳಿಕೆಗಳನ್ನು ಕೊಡಬಾರದು. ದೇಶದ ಭದ್ರತೆಗೆ ಧಕ್ಕೆ ತರುವ ದುಷ್ಕೃತ್ಯಗಳನ್ನು ಎಲ್ಲರೂ ಒಟ್ಟಾಗಿ ವಿರೋಧಿಸಬೇಕು. ಶಾಸಕ ವೇದವ್ಯಾಸ ಕಾಮತ್ ಅವರು ತೊಕ್ಕೊಟ್ಟಿನ ರೈಲ್ವೇ ಹಳಿಯ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ನಡುವಿಗೆಳೆದು ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ.ಇಷ್ಟಲ್ಲದೆ ದೇಶದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಹೇಳಿಕೆ ನೀಡಿ ಒಂದು ಹೆಜ್ಜೆ ಮುಂದು ಹೋಗಿದ್ದಾರೆ.ದೇಶದಲ್ಲಿ ಬಿಜೆಪಿ ಸರಕಾರದ ಆಡಳಿತವೇ ನಡೆಯುತ್ತಿದೆ.ಇಷ್ಟಾದರೂ ಬಾಂಗ್ಲಾ ವಲಸಿಗರು ಇಲ್ಲಿದ್ದಾರೆಂದರೆ ವೈಫಲ್ಯ ಯಾರದ್ದು ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತವಿರುವ ಗುಜರಾತ್ ರಾಜ್ಯದ ಸೂರತ್ ನಲ್ಲಿ ರೈಲ್ವೇ ಹಳಿಗಳನ್ನು ತಪ್ಪಿಸಿದ ಘಟನೆ ನಡೆದು ಆರೋಪಿಗಳನ್ನು ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲ್ವೇ ಹಳಿಗಳಲ್ಲಿ ಗ್ಯಾಸ್ ಸಿಲಿಂಡರ್ ಇಡಲಾಗಿದ್ದು ಆ ಪ್ರಕರಣದಲ್ಲೂ ಆರೋಪಿಗಳ ಬಂಧನ ನಡೆದಿತ್ತು. ದೇಶದ ಭದ್ರತೆಯ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯವಾಗಿ ನಡೆಸಿ ಯಾವುದೇ ಸಮುದಾಯವನ್ನ ಎತ್ತಿ ಕಟ್ಟಬಾರದು. ಶಾಸಕ ವೇದವ್ಯಾಸ್ ಕಾಮತರ ಹೇಳಿಕೆಯು ರಾಜಕೀಯ ಪ್ರಬುದ್ಧತೆಗೆ ಶೋಭೆ ಅಲ್ಲ ಎಂದರು.

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ , ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್,ಮಂಗಳೂರು ಕೆಥೋಲಿಕ್ ಮಹಾಸಭಾದ ಅಧ್ಯಕ್ಷ ಆಲ್ವಿನ್ ಡಿಸೋಜ,ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷ ದಿನೇಶ್ ರೈ, ಮಹಿಳಾ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷೆ ಚಂದ್ರಿಕಾ ರೈ, ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಪ್ರೆಡ್ ಡಿಸೋಜ, ಕಾರ್ಯದರ್ಶಿ ಮನ್ಸೂರ್ ಮಂಚಿಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X