ವಿದ್ಯಾ ಭಾರತಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾಟ: ಸುಶಾಂತ್‌ಗೆ ಚಿನ್ನದ ಪದಕ

ಮಂಗಳೂರು: ಶಕ್ತಿ ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ವಾಮನ ಶೆಟ್ಟಿ ಅಸ್ಸಾಂನಲ್ಲಿ ನಡೆದ ವಿದ್ಯಾ ಭಾರತಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದಾರೆ. ಇದರೊಂದಿಗೆ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಎಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





