ಮಂಗಳೂರಿನಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ರವಿವಾರ ವಿಶ್ವಕರ್ಮ ಜಯಂತಿಯನ್ನು ನಗರದ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಆಚರಿಸಲಾಯಿತು.
ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವರಾದ ಪರ್ಷೋತ್ತಮ್ ರೂಪಾಲಾ ಜಯಂತಿಯನ್ನು ಉದ್ಘಾಟಿಸಿದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಮಣ್ಣಾಗುಡ್ಡೆಯ ಕಾರ್ಪೂರೇಟರ್ ಸಂಧ್ಯಾ ಮೋಹನ್, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರ ಕೆ.ಕೇಶವ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪೂರ್ಣಪ್ರಜ್ಞಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರ ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶ ನೀಡಿದರು. ವಿಶ್ವಕರ್ಮ ಜನಾಂಗದವರು ಹಾಗೂ ವಿವಿಧ ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
Next Story





