ವಿಟ್ಲ: ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲ: ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಚರಂಡಿಯೊಂದರಲ್ಲಿ ಸೋಮವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55) ಎಂದು ಗುರುತಿಸಲಾಗಿದೆ.
ಅಡಿಕೆ ಸಂಸ್ಕರಣೆ ಘಟಕವೊಂದರಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ ರವಿವಾರ ರಾತ್ರಿ 9:30ರ ಬಳಿಕ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ, ಪಾದಚಾರಿಗಳು ಚರಂಡಿಯ ನೀರಲ್ಲಿ ಮೃತದೇಹವೊಂದು ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮೇಲಕ್ಕೆತ್ತಿ ಪರಿಶೀಲಿಸದಾಗ ಅದು ಮಂಜುನಾಥರದ್ದು ಎಂದು ತಿಳಿದುಬಂದಿದೆ.
ಮಂಜುನಾಥ ಮದ್ಯಪಾನ ವ್ಯಸನಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





