Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚಾರ್ಮಾಡಿ ಘಾಟಿಯಲ್ಲಿ ಪ್ರವಾಹದಂತೆ ಹರಿದ...

ಚಾರ್ಮಾಡಿ ಘಾಟಿಯಲ್ಲಿ ಪ್ರವಾಹದಂತೆ ಹರಿದ ನೀರು: ವಾಹನ ಸಂಚಾರಕ್ಕೆ ಅಡಚಣೆ

ವಾರ್ತಾಭಾರತಿವಾರ್ತಾಭಾರತಿ20 Aug 2024 8:28 PM IST
share
ಚಾರ್ಮಾಡಿ ಘಾಟಿಯಲ್ಲಿ ಪ್ರವಾಹದಂತೆ ಹರಿದ ನೀರು: ವಾಹನ ಸಂಚಾರಕ್ಕೆ ಅಡಚಣೆ

ಬೆಳ್ತಂಗಡಿ: ತಾಲೂಕಿನಲ್ಲಿ ಮಂಗಳವಾರ ಮಳೆ ಇಲ್ಲದಿದ್ದರೂ ಸಂಜೆಯ ವೇಳೆ ಮೃತ್ಯುಂಜಯ ನದಿ ತುಂಬಿ ಹರಿದಿದ್ದು, ನದಿ ಬದಿಯ ತೋಟಗಳಿಗೆ ನೀರು ನುಗ್ಗಿದೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆಯಲ್ಲಿಯೇ ನೀರು ಪ್ರವಾಹದಂತೆ ಹರಿದು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.

ಮೃತ್ಯುಂಜಯ ನದಿಯಲ್ಲಿ ಐದು ಗಂಟೆಯ ಸುಮಾರಿಗೆ ನೀರಿನ ಮಟ್ಟ ಏಕಾಏಕಿ ಏರಲಾರಂಭಿಸಿದೆ. ಚಾರ್ಮಾಡಿ ಪರಿಸರದಲ್ಲಿ ಮಳೆ ಸುರಿದಿದ್ದರೂ ನೀರಿನ ಮಟ್ಟ ಏರುವಷ್ಟು ಇರಲಿಲ್ಲ. ಸೋಮವಾರವೂ ಮಳೆ ಇಲ್ಲದಿದ್ದರೂ ನದಿಯಲ್ಲಿ ನೀರು ಏರಿತ್ತು, ಮಂಗಳವಾರವೂ ಇದು ಮುಂದುವರಿದಿದೆ. ಚಾರ್ಮಾಡಿಯ ಕಿಂಡಿ ಅಣೆಕಟ್ಟಿನಲ್ಲಿ ಭಾರೀ ಪ್ರಮಾಣದಲ್ಲಿ ಮರಮಟ್ಟುಗಳು ಬಂದು ಸಿಲುಕಿಕೊಂಡಿದ್ದು ನೀರು ನೇರವಾಗಿ ತೋಟಗಳಿಗೆ ನುಗ್ಗಿದ್ದು ಮನೆಗಳ ಅಂಗಳದ ವರೆಗೂ ನೀರು ಬಂದಿದ್ದು, ಜನರಲ್ಲಿ ಆತಂಕ‌ಮೂಡಿಸಿತ್ತು.

ಸತತ ಎರಡು ದಿನಗಳ ಕಾಲ ಭಾರೀ ಮಳೆ‌ ಇಲ್ಲದಿದ್ದರೂ ನದಿಗಳು ತುಂಬಿ ಹರಿದು ಪ್ರವಾಹದ ಸ್ಥಿತಿ ನಿರ್ಮಾಣ ಮಾಡಿರುವುದು ಜ‌‌ನರಲ್ಲಿ ಆತಂಕ‌ ಮೂಡಿಸಲು ಕಾರಣವಾಗಿದೆ.

ಘಟ್ಟದ ಮೇಲ್ಭಾಗದಲ್ಲಿ ಒಂದೇ ಪ್ರದೇಶದಲ್ಲಿ ಭಾರೀ ಮಳೆ ಸುರಿದು ಜಲಸ್ಪೋಟ ಅಥವಾ ಭೂಕುಸಿತ ಸಂಭವಿಸಿ ಈ ರೀತಿಯ ಪ್ರವಾಹ ಬಂದಿರಬಹುದು ಎಂಬ ಅನುಮಾನ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಕೆಸರು ಮಿಶ್ರಿತ ನೀರಿನೊಂದಿಗೆ ಕಲ್ಲುಗಳು, ಮರದ ತುಂಡುಗಳು ಹರಿದು ಬರುತ್ತಿದ್ದವು ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ವಯನಾಡಿನ ದುರಂತದ ಬಳಿಕ ಜನ ನದಿಯಲ್ಲಿ ನೀರು ಏರುತ್ತಿರುವುದನ್ನು ಆತಂಕದಿಂದ ನೋಡುತ್ತಿದ್ದಾರೆ. ಯಾವ ಕಾರಣದಿಂದಾಗಿ ಈ ರೀತಿ ಆಗುತ್ತಿದೆ ಎಂಬ ಬಗ್ಗೆ ಸಮರ್ಪಕವಾದ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X