Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.25 ರಿಂದ ಮಂಗಳೂರು ವಿವಿಯಲ್ಲಿ "ವೇವ್ಸ್...

ನ.25 ರಿಂದ ಮಂಗಳೂರು ವಿವಿಯಲ್ಲಿ "ವೇವ್ಸ್ 2025 - ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ"

ವಾರ್ತಾಭಾರತಿವಾರ್ತಾಭಾರತಿ24 Nov 2025 3:05 PM IST
share
Press Conference on Waves 2025 – Inter-College Cultural Festival

ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ "ವೇವ್ಸ್ 2025 – ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ"ವು ನವೆಂಬರ್ 25ರಿಂದ 27ರ ವರೆಗೆ ಮಂಗಳಗಂಗೋತ್ರಿಯಲ್ಲಿ ನಡೆಯಲಿದೆ ಎಂದು ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೆಶಕರಾದ ಪ್ರೊ.ಪ್ರಶಾಂತ್ ನಾಯ್ಕ್ ಅವರು ಹೇಳಿದರು.

ಅವರು ಸೋಮವಾರ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡುತ್ತಾ, ‌ಈ ವರ್ಷದ ಉತ್ಸವದ ವಿಷಯ ಸಾಂಸ್ಕೃತಿಕ ಸಂಯೋಜನೆ 2025: ವಿಕಸಿತ ಭಾರತದತ್ತ” ಆಗಿದ್ದು, ಭಾರತೀಯ ವಿಶ್ವವಿದ್ಯಾಲಯಗಳ ಸಂಘಟನೆಯ (AIU) ನವದೆಹಲಿ ಆಶ್ರಯದಲ್ಲಿ ನಡೆಯುವ AIU 39ನೇ ಅಂತರ-ವಿಶ್ವವಿದ್ಯಾಲಯ ಯುವೋತ್ಸವ (ಯುನಿಫೆಸ್ಟ್) 2025–26ರಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆಮಾಡುವುದು ಇದರ ಉದ್ದೇಶವಾಗಿದೆ ಎಂದರು.

‌ 25ರಂದು ಬೆಳಿಗ್ಗೆ 9:30ಕ್ಕೆ ಮಂಗಳಾ ಸಭಾಂಗಣದಲ್ಲಿ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾದ ಪ್ರೊ. ಪಿ.ಎಲ್. ಧರ್ಮ ಅವರು ಅಧ್ಯಕ್ಷತೆ ವಹಿಸಲಿರುವರು. ಡಾ. ಶಾನಿ ಕೆ.ಆರ್., ನಿವೃತ್ತ ರಾಜಕೀಯ ವಿಜ್ಞಾನ ಪ್ರಾಧ್ಯಾಪಕಿ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಇವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಈ ಉತ್ಸವದಲ್ಲಿ ಸಂಗೀತ, ನೃತ್ಯ, ಸಾಹಿತ್ಯ, ರಂಗಭೂಮಿ ಮತ್ತು ಲಲಿತಕಲೆ ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ. ಶಾಸ್ತ್ರೀಯ ಹಾಗೂ ಪಾಶ್ಚಾತ್ಯ ವಾದ್ಯ/ಸ್ವರ, ಜನಪದ ವಾದ್ಯ, ಶಾಸ್ತ್ರೀಯ ಮತ್ತು ಜನಪದ ನೃತ್ಯ, ಸೃಜನಾತ್ಮಕ ನೃತ್ಯ ನಿರ್ದೇಶನ, ಚರ್ಚೆ ಸ್ಪರ್ಧೆ, ಭಾಷಣ, ರಸಪ್ರಶ್ನೆ, ಏಕಾಂಕ ನಾಟಕ, ಕಿರು ನಾಟಕ, ಮೂಕಾಭಿನಯ (ಮೈಮ್), ಹಾಸ್ಯಾನುಕರಣ (ಮಿಮಿಕ್ರಿ), ಹಾಗೂ ಚಿತ್ರಕಲೆ, ಕೊಲಾಜ್, ಪೋಸ್ಟರ್ ನಿರ್ಮಾಣ, ಮಣ್ಣಿನ ಶಿಲ್ಪ, ವ್ಯಂಗ್ಯಚಿತ್ರ, ರಂಗೋಲಿ ಮುಂತಾದ ದೃಶ್ಯಕಲೆ ಸ್ಪರ್ಧೆಗಳು ನಡೆಯಲಿವೆ. ಈ ಉತ್ಸವವು ವಿದ್ಯಾರ್ಥಿ ಕಲಾವಿದರ ಪ್ರತಿಭೆಯನ್ನು ಪೋಷಿಸಿ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಿಗೆ ಅವರನ್ನು ಮುನ್ನಡೆಸುವ ಮಹತ್ವದ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಮಂಗಳೂರು ವಿಶ್ವವಿದ್ಯಾಲಯವು ಸ್ಥಾಪನೆಯಾದ ಆರಂಭದ ದಿನಗಳಿಂದಲೇ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವ ದೀರ್ಘಪರಂಪರೆಯನ್ನು ಹೊಂದಿದೆ.

ವೇವ್ಸ್ 2025 ಸ್ಪರ್ಧೆಯ ಪ್ರಥಮ ಸ್ಥಾನ ವಿಜೇತರಿಗೆ 2026ರ ಫೆಬ್ರವರಿ 9ರಿಂದ 13ರ ವರೆಗೆ ಮೈಸೂರುನ ಜಿಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನಲ್ಲಿ ನಡೆಯುವ AIU 39ನೇ ದಕ್ಷಿಣ-ಪೂರ್ವ ವಲಯ ಅಂತರ-ವಿಶ್ವವಿದ್ಯಾಲಯ ಯುವೋತ್ಸವಕ್ಕೆ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಅವಕಾಶ ಒದಗಿಸಲಾಗುವುದು. ವಲಯ ಮಟ್ಟದಲ್ಲಿ ಆಯ್ಕೆಯಾಗುವ ಸ್ಪರ್ಧಿಗಳಿಗೆ 2026ರ ಮಾರ್ಚ್ 10ರಿಂದ 14ರ ವರೆಗೆ ಚೆನ್ನೈಯ ಸಥ್ಯಭಾಮಾ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆಯುವ AIU ರಾಷ್ಟ್ರೀಯ ಯುನಿಫೆಸ್ಟ್‌ನಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಅವಕಾಶ ದೊರಕಲಿದೆ ಎಂದರು.

ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ 15 ಸಂಯೋಜಿತ ಕಾಲೇಜುಗಳಿಂದ ಸುಮಾರು 500 ವಿದ್ಯಾರ್ಥಿಗಳು ವೇವ್ಸ್ 2025ನಲ್ಲಿ ನೋಂದಣಿಯಾಗಿದ್ದು, ವಿಶ್ವವಿದ್ಯಾಲಯದ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವಲ್ಲಿ ಮತ್ತು ಕಲಾತ್ಮಕ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಕೊಡುಗೆಯನ್ನು ನೀಡಲಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ, ಡಾ. ವಿಶ್ವನಾಥ್ , ಪ್ರಚಾರ ಸಮಿತಿಯ ಸದಸ್ಯ, ಪತ್ರಕರ್ತ ಡಾ.ಸತೀಶ್ ಕೊಣಾಜೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X