Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರ್ವ ಆರೋಗ್ಯ ಕಾಪಾಡಬಲ್ಲ ವೈದ್ಯಕೀಯ...

ಸರ್ವ ಆರೋಗ್ಯ ಕಾಪಾಡಬಲ್ಲ ವೈದ್ಯಕೀಯ ವ್ಯವಸ್ಥೆಯ ಅಗತ್ಯವಿದೆ : ಡಾ.ಎಂ.ಮೋಹನ ಆಳ್ವ

ಆಳ್ವಾಸ್‌ನಲ್ಲಿ ಸ್ವಾತಂತ್ರ್ಯೋವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2023 10:55 PM IST
share
ಸರ್ವ ಆರೋಗ್ಯ ಕಾಪಾಡಬಲ್ಲ ವೈದ್ಯಕೀಯ ವ್ಯವಸ್ಥೆಯ ಅಗತ್ಯವಿದೆ : ಡಾ.ಎಂ.ಮೋಹನ ಆಳ್ವ

ಮೂಡುಬಿದಿರೆ: ‘ಅಹಿಂಸೆ ಮೂಲಕ ಸರ್ವಜನರ ಒಗ್ಗೂಡಿಸಿದ, ಮನೋಶಕ್ತಿಯಿಂದ ಸ್ವಾತಂತ್ರ್ಯ ಪಡೆದ ದೇಶ ನಮ್ಮದು. ‘ಸುಸ್ಥಿರ, ಸಾಮರಸ್ಯ, ಸಮಾನತೆ, ಸರ್ವ ಜೀವಿಗಳ ನೆಲೆಯ ಭಾರತ ನಿರ್ಮಾಣವೇ ನಮ್ಮೆಲ್ಲರ ಗುರಿಯಾಗಬೇಕು. ಭಾಷಾ ವೈವಿಧ್ಯತೆ, ಕಲೆ, ಕೌಶಲ, ಶ್ರಮಿಕರು, ಕೃಷಿಕರಿಗೆ ಆಶ್ರಯವಾಗುವ ಸಂಸ್ಥೆಗಳನ್ನು ರೂಪಿಸಬೇಕು. ಸರ್ವರ ಆರೋಗ್ಯ ಕಾಪಾಡಬಲ್ಲ ವೈದ್ಯಕೀಯ ವ್ಯವಸ್ಥೆ ಬೇಕಾಗಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಆಶಯ ವ್ಯಕ್ತಪಡಿಸಿದರು.

ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕೆ.ವಿ.ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ 77 ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ಅಂಚೆ, ರೈಲ್ವೆ, ತಂತ್ರಜ್ಞಾನಗಳ ಬೃಹತ್ ಜಾಲಗಳು, ಕಲ್ಲಿದ್ದಲು, ವಿದ್ಯುತ್, ಧಾನ್ಯ, ಸೆಣಬು, ಗೋಧಿ, ಅಕ್ಕಿ, ಸಕ್ಕರೆ, ಸಾಂಬಾರು, ಹಾಲು, ಮತ್ಸ್ಯ ಜವಳಿ ಉತ್ಪಾದನೆಗಳು, ಗುಡಿ ಕೈಗಾರಿಕೆ, ಶಿಲ್ಪಕಲೆ ಸೇರಿದಂತೆ ದೇಶವು ಹಲವು ಬಗೆಗಳಲ್ಲಿ ಮುಂಚೂಣಿಯಲ್ಲಿದೆ. ಜನಸಂಖ್ಯೆ, ಯುವಶಕ್ತಿಯಲ್ಲೂ ನಾವೇ ಮುಂದಿದ್ದೇವೆ. ‘ಆದರೆ, ತಿದ್ದಿಕೊಳ್ಳುವ, ಪರಿಷ್ಕರಿಸಿಕೊಳ್ಳುವ, ಆವಿಷ್ಕರಿಸುವ ಸಾಧನೆಗಳು ನಮ್ಮ ಮುಂದೆ ಸಾಕಷ್ಟಿವೆ. ಸಂತೋಷ ಭರಿತ, ಸಮೃದ್ಧ, ಸದೃಢ, ಸಂಪತ್ಭರಿತ ದೇಶವನ್ನು ನಾವೆಲ್ಲ ನಿರ್ಮಿಸಬೇಕಾಗಿದೆ’ ಎಂದು ನೆನಪಿಸಿದರು.

‘ಧರ್ಮ, ಮತ, ಜಾತಿ, ಭಾಷೆಗಳ ನಡುವೆ ಸಾಮರಸ್ಯ ನಿರ್ಮಿಸಿ, ವೈರುತ್ಯ, ವೈಮನಸ್ಸು, ಅಸಮಾನತೆಗಳನ್ನು ಹೋಗಲಾಡಿಸಬೇಕು. ಏಕತೆ, ಸಂಪತ್ತಿನ ಸಮಾನ ಹಂಚಿಕೆ, ಲಿಂಗ ತಾರತಮ್ಯ ರಹಿತ, ಕ್ರೌರ್ಯ- ಬಹಿಷ್ಕಾರಗಳಿಲ್ಲದ ಸಮುದಾಯ ರೂಪಿಸಬೇಕು. ಪಾರದರ್ಶಕ ಆಡಳಿತದ ಹೊಣೆಗಾರಿಕೆ ನಮ್ಮ ಮುಂದಿದೆ’ ಎಂದು ವಿವರಿಸಿದರು.

ಹೊರದೇಶದಲ್ಲಿ ಯುವಶಕ್ತಿ ಅವಶ್ಯವಾಗಿದೆ. ನಮ್ಮ ದೇಶದ ಯುವಶಕ್ತಿಯ ಮೇಲೆ ಇತರ ದೇಶಗಳ ಕಣ್ಣಿದೆ. ಅದಕ್ಕಾಗಿಯ ವಿದ್ಯಾಭ್ಯಾಸ, ಉದ್ಯೋಗ, ಐಷಾರಾಮಿ ಜೀವನದ ಮೂಲಕ ಗಿಲೀಟಿನ ಆಮಿಷ ನೀಡಿ ಸೆಳೆಯುತ್ತಿದ್ದಾರೆ. ಅದಕ್ಕೆ ಮರುಳಾಗಬೇಡಿ’ ಎಂದರು.

ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ. ವಿನಯ ಆಳ್ವ, ಆಡಳಿತ ಮಂಡಳಿಯ ಜಯಶ್ರೀ ಅಮರನಾಥ ಶೆಟ್ಟಿ, ಉದ್ಯಮಿ ಶ್ರೀಪತಿ ಭಟ್ ಹಾಗೂ ಇನ್ನಿತರ ಗಣ್ಯರು ಇದ್ದರು.

ಮಾಜಿ ಸೈನಿಕರು, ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಗಳು, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಪದವಿ ಪೂರ್ವ ಕಾಲೇಜು ಸೇರಿದಂತೆ 10ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸಂಭ್ರಮದಲ್ಲಿ ಪಾಲ್ಗೊಂಡರು.

ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ‘ಕೋಟಿ ಕಂಠೋನ್ಸೆ” ‘ವಂದೇ ಮಾತರಂ’, ‘ಜನ ಗಣ ಮನ’ವನ್ನು ಸುಶ್ರಾವ್ಯವಾಗಿ ಹಾಡಿದರು. ಉಪನ್ಯಾಸಕ ವೇಣುಗೋಪಾಲ ಕೆ. ಶೆಟ್ಟಿ ಹಾಗೂ ಡಾ.ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಪರೇಡ್ ಕಮಾಂಡರ್ ಆಗಿ ಎನ್‌ಸಿಸಿ ಅಂಡರ್ ಆಫೀಸರ್ ಪುಷ್ಯ ಪೊನ್ನಮ್ಮ ಹಾಗೂ ಗೌರವ ವಂದನೆಯನ್ನು ಅಂಡರ್ ಆಫೀಸರ್‌ಗಳಾದ ವಿಕಾಸ್ ಗೌಡ ಮತ್ತು ಅಬ್ರಹಾರ್ ನೆರವೇರಿಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X