Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್ಲಾಕ್, ಲೇಡಿಗೋಷನ್ ಸೂಪರ್...

ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ2 Nov 2025 12:35 PM IST
share
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್
ಲೇಡಿಗೋಷನ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಚಾಲನೆ

ಮಂಗಳೂರು: ಕ್ಯಾಥ್ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಜೊತೆಗಾರರಿಗೆ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾತ್ರಿ ಊಟ ವಿತರಿಸುವ ವಿಸ್ತರಿತ 'ಕಾರುಣ್ಯ ಯೋಜನೆ'ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಇಷ್ಟು ಸ್ವಚ್ಛ ಪರಿಸರ, ಗುಣಮಟ್ಟದ ಚಿಕಿತ್ಸೆ ಸರಕಾರಿ ವ್ಯವಸ್ಥೆಯಲ್ಲಿ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ವೆನ್ಲಾಕ್ನಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಹೊರ ರೋಗಿ ವಿಭಾಗ ಸಿದ್ಧಗೊಳ್ಳುತ್ತಿದೆ. ಕೆಎಂಸಿಯಿಂದ 35 ಕೋಟಿ ರೂ. ಮೊತ್ತದ ಸೌಲಭ್ಯ ಬರಲಿದೆ. ಲೇಡಿಗೋಷನ್ನಲ್ಲಿ ಐಐಸಿಯು ನಿರ್ಮಾಣವಾಗಿದೆ. ಇದೆಲ್ಲವನ್ನು ಬಳಸಿಕೊಂಡು, ಇನ್ನಷ್ಟು ಸೌಲಭ್ಯ ಕಲ್ಪಿಸಿ ಉತ್ಕೃಷ್ಟ ಆಸ್ಪತ್ರೆಗಳಾಗಿ ಮಾರ್ಪಡಿಸುತ್ತೇವೆ ಎಂದು ಸಚಿವರು ಹೇಳಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸರಕಾರದಿಂದ ಊಟ ಕೊಡುತ್ತಿದ್ದೇವೆ. ಅವರ ಜೊತೆ ಇರುವವರಿಗೆ ಕೊಡಲು ಸಾಧ್ಯವಾಗುತ್ತಿಲ್ಲ. ಅವರು ಹೊರಗೆ ಹೋಗುವುದು ಕಷ್ಟ. ಇದನ್ನು ಮನಗಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ಎಂಟು ವರ್ಷಗಳಿಂದ ನಿರಂತರ ರಾತ್ರಿ ಊಟ ನೀಡುವ ಎಂ. ಫ್ರೆಂಡ್ಸ್ ಕಾರ್ಯ ಶ್ಲಾಘನೀಯ. ಅದನ್ನು ಲೇಡಿಗೋಷನ್ಗೂ ವಿಸ್ತರಿಸಿರುವುದು ಅಭಿಮಾನಪಡುವ ಪುಣ್ಯದ ಕೆಲಸ. ನಿಮ್ಮ ಜತೆ ನಾವಿದ್ದೇವೆ ಎಂದು ಸಚಿವರು ಹೇಳಿದರು.

ರೋಹನ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಪರವಾಗಿ ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂತೇರೊ ಅವರಿಗೆ ಸಚಿವರು `ಕರುಣಾಳು ಕನ್ನಡಿಗ' ಪ್ರಶಸ್ತಿ ಪ್ರದಾನ ಮಾಡಿದರು.

ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ ಶುಭ ಹಾರೈಸಿದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಲೇಡಿಗೋಷನ್ ಆರ್ಎಂಒ ಡಾ.ಸುಧಾಕರ್, ಎಂ. ಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ, ಕೊಶಾಧಿಕಾರಿ ಝುಬೈರ್ ಬುಳೇರಿಕಟ್ಟೆ, ಟ್ರಸ್ಟಿಗಳಾದ ಅನ್ವರ್ ಹುಸೇನ್, ಶೇಕ್ ಇಸಾಕ್, ಅಬೂಬಕರ್ ಪುತ್ತು, ಡಾ.ಮುಬಶ್ಶಿರ್, ಹಂಝ ಬಸ್ತಿಕೋಡಿ, ಮುಸ್ತಫಾ ಗೋಳ್ತಮಜಲು, ಬಶೀರ್ ಅಹ್ಮದ್, ಇಸ್ಮಾಯೀಲ್ ಕೋಲ್ಪೆ, ಇಬ್ರಾಹೀಂ ನಂದಾವರ, ಹಸೈನಾರ್ ಶಾಫಿ, ಮುಹಮ್ಮದ್ ಸಫ್ವಾನ್ ವಿಟ್ಲ, ಮುಹಮ್ಮದ್ ಕುಂಞಿ ಟಾಪ್ಕೊ ಮತ್ತಿತರರು ಉಪಸ್ಥಿತರಿದ್ದರು.

ಎಂ. ಫ್ರೆಂಡ್ಸ್ ಕಾರುಣ್ಯ ವಿಭಾಗದ ಮುಖ್ಯಸ್ಥ ಮುಹಮ್ಮದ್ ಹನೀಫ್ ಗೋಳ್ತಮಜಲು ಸ್ವಾಗತಿಸಿದರು. ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಎಂ.ಆರ್. ಪ್ರಾಸ್ತಾವಿಕ ಮಾತನಾಡಿದರು.

ಎಂ. ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರೆ ವಂದಿಸಿದರು. ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X