Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಂ.ಆರ್.ಪಿ.ಎಲ್. ಮುಖ್ಯ ದ್ವಾರದಲ್ಲಿ ಕಾರ್ಮಿಕರ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ10 July 2025 2:47 PM IST
share
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಂ.ಆರ್.ಪಿ.ಎಲ್. ಮುಖ್ಯ ದ್ವಾರದಲ್ಲಿ ಕಾರ್ಮಿಕರ ಮುಷ್ಕರ

ಸುರತ್ಕಲ್ : ದೇಶವ್ಯಾಪಿ ಪೆಟ್ರೋಲಿಯಂ ಸೆಕ್ಟರ್ ಗಳಲ್ಲಿ ಪಿ.ಜಿ.ಡಬ್ಯು,ಎಪ್ ಐ ಬೆಳಿಗ್ಗಿನಿಂದ ಸಂಜೆಯವರೆಗೆ ಮುಷ್ಕರಕ್ಕೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಎಂ.ಆರ್.ಪಿ.ಎಲ್ ಕರ್ಮಚಾರಿ ಸಂಘ, ಎಂ.ಆರ್.ಪಿ.ಎಲ್. ಎಂಪ್ಲಾಯಿಸ್ ಯೂನಿಯನ್ ಹಾಗೂ ಪೆಟ್ರೋಲಿಯಂ ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಎಂ.ಆರ್.ಪಿ.ಎಲ್. ಸಂಸ್ಥೆಯ ಮುಖ್ಯ ದ್ವಾರದಲ್ಲಿ ಬುಧವಾರ ಮುಷ್ಕರ ಹಮ್ಮಿಕೊಳ್ಳಲಾಯಿತು.

ಎಂ.ಆರ್.ಪಿ.ಎಲ್. ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಶರತ್ ಜೋಗಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯ ಕೆಲವೊಂದು ಕಾನೂನುಗಳು ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದ್ದು, ಅದನ್ನು ಸರಳೀಕರಣಗೊಳಿಸಬೇಕು. ಸಂಸ್ಥೆಯು ನಷ್ಟದಲ್ಲಿದ್ದರೆ ಅದನ್ನು ತುಂಬಲು ಎಂಪ್ಲಾಯಿಸ್ ಹಾಗೂ ಕಾರ್ಮಿಕರಿಗೆ ನೀಡುವ ಸವಲತ್ತುಗಳ ಕಡಿತಗೊಳಿಸುವುದು ಸರಿಯಲ್ಲ. ನಮ್ಮ ಎಲ್ಲಾ ಬೇಡಿಕೆಗಳಿಗೆ ಸರಕಾರ ಹಾಗೂ ಎಂ.ಅರ್.ಪಿ.ಎಲ್. ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಕಾರ್ಮಿಕ ವಿರೋಧಿ ಕಾನೂನು ಜಾರಿ ಮಾಡಿರುವುದನ್ನು ವಾಪಾಸ್ ಪಡೆಯಬೇಕು. ಸಾರ್ವಜನಿಕ ವಲಯದ ಕಂಪೆನಿಗಳನ್ನು ಖಾಸಗೀಕರಣ ಮಾಡಬಾರದು. ಕಾರ್ಮಿಕರ ಆರೋಗ್ಯ ಭದ್ರತೆಯಾಗಿರುವ ಇ.ಎಸ್.ಐ. ವ್ಯವಸ್ಥೆಯನ್ನು ಶೀಘ್ರ ಆರಂಭಿಸಬೇಕು. ಕಾರ್ಮಿಕ ಸಂಘಟನೆಯನ್ನು ರಚಿಸುವ ಹಕ್ಕನ್ನು ಕಸಿದುಕೊಳ್ಳಲಾಗಿದ್ದು, ಇದನ್ನು ರಾಜ್ಯ ಸರಕಾರ ವಾಪಾಸ್ ಪಡೆಯಬೇಕು. ಐದು ವರ್ಷಕೊಮ್ಮೆ ಹೆಚ್ಚಳವಾಗಬೇಕಿದ್ದ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು. ಇ.ಎಸ್.ಐ ವಂಚಿತರಾದ ಕಾರ್ಮಿಕರಿಗೆ ಮೆಡಿಕ್ಲೈಮ್ ಪಾಲಿಸಿ ನೀಡಬೇಕು. ಕಾರ್ಮಿಕರಿಗೆ ಪ್ರಸ್ತುತ ನೀಡುತ್ತಿದ್ದ ಸಂಸ್ಥೆಯ ವಿಶೇಷ ಭತ್ತೆ ದ್ವಿಗುಣಗೊಳಿಸಬೇಕು. ಕಾರ್ಮಿಕನೊಬ್ಬ ಕೆಲಸದ ಸಮಯ ಅಥವಾ ಗೇಟ್ ನ ಹೊರಗಡೆ ಮರಣ ಹೊಂದಿದ್ದಲ್ಲಿ ಪ್ರಸ್ತುತ ನೀಡುತ್ತಿದ್ದ 10 ಲಕ್ಷ ಇನ್ಸೂರೆನ್ಸ್ ನ್ನು 50 ಲಕ್ಷಕ್ಕೆ ಹೆಚ್ಚಿಸಬೇಕು.ಕಾರ್ಮಿಕರು ಎತ್ತರ ಪ್ರದೇಶದಲ್ಲಿ ಕೆಲಸ ಮಾಡುವುದರಿಂದ ಎತ್ತರ ಭತ್ತೆ ನೀಡಬೇಕು. ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಿ ಕೊಡಬೇಕು. ಕಾರ್ಮಿಕರಿಗೆ ಕ್ಯಾಂಟಿನ್ ವ್ಯವಸ್ಥೆ ಸರಿ ಪಡಿಸಬೇಕು. ಮಹಿಳಾ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂಬ ಮನವಿಯನ್ನು ಎಂಆರ್ ಪಿಎಲ್ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬೇಡಿಕೆಗಳನ್ನು ಈಡೇರಿಸದ ಪಕ್ಷದಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾ ನಿರತರು ಘೋಷಿಸಿದರು.

ಈ ಸಂದರ್ಭ ಎಂ.ಆರ್.ಪಿಎಲ್ ಎಂಪ್ಲಾಯಿಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಾಯಿಪೃಥ್ವಿ, ಕರ್ಮಚಾರಿ ಸಂಘದ ಅಧ್ಯಕ್ಷ ಪ್ರಸಾದ್ ಅಂಚನ್, ಉಪಾಧ್ಯಕ್ಷ ಸುರೇಶ್ ಪೊಸ್ರಾಲ್, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಭಟ್, ಜತೆ ಕಾರ್ಯದರ್ಶಿ ಸುನೀಲ್ ಬೋಳ, ಸುರೇಶ್ ಪೂಜಾರಿ ಕೃಷ್ಣಾಪುರ, ಕೋಶಾಧಿಕಾರಿ ಪುರುಷೋತ್ತಮ, ಎಸ್ ಸಿ ವಿಭಾಗದ ಅಧ್ಯಕ್ಷ ಸಂತೋಷ್ ಹಾಗೂ ಎಂಪ್ಲಾಯಿಸ್ ಯೂನಿಯನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X