ವಿಶ್ವ ಕೊಂಕಣಿ ಕೇಂದ್ರ: ಸಂದರ್ಶನದ ಕೌಶಲ್ಯಗಳ ಬಗ್ಗೆ ಮಾಹಿತಿ ಕಾರ್ಯಗಾರ

ಮಂಗಳೂರು, ಆ.2: ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆಧ್ಯ ಗೌಡ್ ಬ್ರಾಹ್ಮಣ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುತ್ತಿರುವ ದೇಶ್ಕರ್ ಸಮುದಾಯದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಾಲ್ಕು ದಿನಗಳ ಚಟುವಟಿಕೆ ಆಧಾರಿತ ‘ಪರಿಣತಿ’ -2025’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಎರಡನೇ ದಿನ ಶುಕ್ರವಾರ ಸಂಪನ್ಮೂಲ ವ್ಯಕ್ತಿಯಾಗಿ ಪ್ರೀತಂ ಕಾಮತ್ ಅವರು ಸಂದರ್ಶನದ ಕೌಶಲ್ಯಗಳ ಬಗ್ಗೆ ಮಾಹಿತಿ ನೀಡಿದರು.
ಸಂಜೆ ಮಂಗಳೂರು ಪ್ರಖ್ಯಾತ ಹೃದಯ ರೋಗ ತಜ್ಞ ಡಾ. ಮನೀಶ್ ರೈ ಹಾಗೂ ಆಪ್ತ ಸಮಾಲೋಚನಾ ತಜ್ಞ ಡಾ. ಅವಿನಾಶ್ ಜಿ ಕಾಮತ್ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.
ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಡಿ. ರಮೇಶ ನಾಯಕ್ ಮೈರಾ, ಸುಚಿತ್ರಾ ರಮೇಶ್ ನಾಯಕ್, ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ದೇವದಾಸ್ ಪೈ, ಶಕ್ತಿ ರೆಸಿಡೆನ್ಸಿಯಲ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ನಟೇಶ್ ಆಳ್ವ, ಉಪಸ್ಥಿತರಿದ್ದರು.
ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಮುರಳಿಧರ ಪ್ರಭು ವಗ್ಗ, ಕಾರ್ಯದರ್ಶಿ ರವೀಂದ್ರ ನಾಯಕ್ ಕುಂಟಲ್ಪಾಡಿ, ನಿಕಟಪೂರ್ವ ಅಧ್ಯಕ್ಷ ವಿಜಯ ಶೆಣೈ ಕೊಡಂಗೆ, ಹಿರಿಯರಾದ ಸಿ ಎ ಶ್ರೀನಿವಾಸ ಕಾಮತ್, ಸುಜಾತಾ ರಮೇಶ್ ಸಾಮಂತ್, ಗೋಪಾಲ್ ಸಾಮಂತ್ ಮೈರಾ, ಸುರೇಂದ್ರ ಸಾಮಂತ್, ಪಾವನಾಕ್ಷಿ ಪ್ರಭು, ಅನಂತ ಪ್ರಭು ಮರೋಳಿ, ಕಮಲಾಕ್ಷ ಪ್ರಭು ಒಡ್ಡೂರು, ಲಕ್ಷ್ಮೀ ಕಿಣಿ, ವಿಘ್ನೇಶ್ ಹಾಗೂ ಶಕ್ತಿ ರೆಸಿಡೆನ್ಸಿಯಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುಮಾರು 200 ವಿದ್ಯಾರ್ಥಿಗಳು ಈ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿಎ ನಂದಗೋಪಾಲ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಬಿರಾರ್ಥಿ ಜಯಸೂರ್ಯ ನಾಯಕ್ ವಂದಿಸಿದರು, ಡಾ. ವಿಜಯಲಕ್ಷ್ಮೀ ನಾಯಕ್ ಕಾರ್ಯಕ್ರಮ ನಿರೂಪಿಸಿದರು.







