Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬರವಣಿಗೆ ವ್ಯಕ್ತಿತ್ವವನ್ನು...

ಬರವಣಿಗೆ ವ್ಯಕ್ತಿತ್ವವನ್ನು ರೂಪಿಸುತ್ತದೆ: ಬಿ.ಎಂ. ರೋಹಿಣಿ

ಯುವವಾಹಿನಿಯಿಂದ ಬರಹಗಾರರ ಸಮಾಗಮ

ವಾರ್ತಾಭಾರತಿವಾರ್ತಾಭಾರತಿ30 July 2023 5:19 PM IST
share
ಬರವಣಿಗೆ ವ್ಯಕ್ತಿತ್ವವನ್ನು ರೂಪಿಸುತ್ತದೆ: ಬಿ.ಎಂ. ರೋಹಿಣಿ

ಮಂಗಳೂರು, ಜು.30: ಸಾಹಿತ್ಯವನ್ನು ಪ್ರೀತಿಸಲು ಕಲಿಯಿರಿ, ಬರವಣಿಗೆ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಸಮಾಜವನ್ನು ನೋಡುವ ದೃಷ್ಟಿ ಕೋನವನ್ನು ಸಾಹಿತ್ಯದ ರೂಪದಲ್ಲಿ ನಾವು ಕಂಡು ಕೊಳ್ಳಬಹುದು, ಮಹಿಳೆಯರು ಸಾಹಿತ್ಯ ಕ್ಷೇತ್ರವನ್ನು ಬಹು ಬೇಗ ರೂಢಿಸಿಕೊಳ್ಳುತ್ತಾರೆ ಎಂದು ಹಿರಿಯ ಸಾಹಿತಿ ಬಿ. ಎಂ. ರೋಹಿಣಿ ಹೇಳಿದ್ದಾರೆ.

ಅವರು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಯುವ ಸಿಂಚನ ಸಂಪಾದಕ ಮಂಡಳಿಯ ಆಶ್ರಯದಲ್ಲಿ ರವಿವಾರ ಮಂಗಳೂರು ಉರ್ವ ಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಬರಹಗಾರರ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಾವಣಗೆರೆಯ ಉಪನ್ಯಾಸಕ ಫ್ರಾನ್ಸಿಸ್ ಗ್ಸೇವಿಯರ್ ಅವರು ಕೃತಿ ಸಾಮ್ಯತೆ ಹಾಗೂ ಪ್ರಕಾಶನದ ಬಗ್ಗೆ, ಮೂಡಬಿದಿರೆಯ ಆಳ್ವಾ ಸ್‌ನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಅವರು ಬರವಣಿಗೆಯಲ್ಲಿ ಅಧ್ಯಯನಶೀಲತೆಯ ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನಿಶ್ ಪೂಜಾರಿ ವೇಣೂರು ಅವರು ನಮ್ಮ ಮನಸ್ಸಿನ ಗಟ್ಟಿತನ ಹಾಗೂ ಕಲಾತ್ಮಕತೆಯ ಬಗ್ಗೆ ವಿಶೇಷ ಆಟದ ಮೂಲಕ ಮಾಹಿತಿ ನೀಡಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 60 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಅರ್ಹತಾ ಪತ್ರವನ್ನು ವಿತರಿಸಲಾಯಿತು.

ಚೇತನ್ ವರ್ಕಾಡಿ, ಜಯಾರಂ ಕಾರಂದೂರು, ಸಾಧು ಪೂಜಾರಿ ಅನಿಸಿಕೆ ವ್ಯಕ್ತಪಡಿಸಿದ್ದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ, ಸಂಯೋಜಕ ಯುವ ಸಿಂಚನದ ಸಂಪಾದಕ ದಿನಕರ್ ಡಿ. ಬಂಗೇರ, ಸಂಪಾದಕ ಬಳಗದ ಸ್ಮಿತೇಶ್ ಬಾರ್ಯ, ರಾಜೇಶ್ ಬಲ್ಯ ಉಪಸ್ಥಿತರಿದ್ದರು.

ಯುವ ಸಿಂಚನದ ಕಾರ್ಯನಿರ್ವಾಹಕ ಸಂಪಾದಕ ಜಗದೀಶ್‌ಚಂದ್ರ ಡಿ. ಕೆ. ಸ್ವಾಗತಿಸಿದರು, ಕಾರ್ಯದರ್ಶಿ ರೋಹಿತ್ ವಂದಿಸಿದರು. ರಶ್ಮಿತಾ ಸನಿಲ್ ಮತ್ತು ಅರ್ಚನಾ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X