ಯೋಗಾಸನ ಸ್ಪರ್ಧೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟು ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಕ್ರೀಡಾಪಟುಗಳು 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಹಾಗೂ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ತಂಡ ಪ್ರಶಸ್ತಿ ಯೊಂದಿಗೆ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತದೆ.
ಫಲಿತಾಂಶ : 17 ವರ್ಷ ವಯೋಮಿತಿಯ ಬಾಲಕ - ಬಾಲಕಿಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಮತ್ತು ಐದನೇ, ಬಾಲಕ - ಬಾಲಕಿಯರ ರಿದಮಿಕ್‍ನಲ್ಲಿ ಪ್ರಥಮ, ಬಾಲಕ - ಬಾಲಕಿಯರ ಆರ್ಟಿಸ್ಟಿಕ್‍ನಲ್ಲಿ ಪ್ರಥಮ.
14 ವರ್ಷ ವಯೋಮಿತಿಯ ಬಾಲಕ - ಬಾಲಕಿಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಮತ್ತು ಚತುರ್ಥ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಒಟ್ಟು 28 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ಅದರಲ್ಲಿ 27 ವಿದ್ಯಾರ್ಥಿಗಳು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.
ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವರು ಅಭಿನಂದನೆಯನ್ನು ಸಲ್ಲಿಸುತ್ತಾರೆ.







