Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಖ್ಯೆ ವೃದ್ಧಿಸಲು ಮಕ್ಕಳೇ...

ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ, ಮತಾಂತರ ಮಾಡಿ: ಸೂಲಿಬೆಲೆ ವಿವಾದಾತ್ಮಕ ಭಾಷಣ

ವಾರ್ತಾಭಾರತಿವಾರ್ತಾಭಾರತಿ20 April 2025 1:25 PM IST
share
ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ, ಮತಾಂತರ ಮಾಡಿ: ಸೂಲಿಬೆಲೆ ವಿವಾದಾತ್ಮಕ ಭಾಷಣ

ಬೆಳ್ತಂಗಡಿ, ಎ.20: ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ. ಮತಾಂತರ ಮಾಡಿ. ಈ ಸಂಬಂಧ ಸರಕಾರ ಮಾಡಿರುವ ಕಾನೂನನ್ನೇ ಅಸ್ತ್ರವಾಗಿ ಬಳಸಿಕೊಳ್ಳಿ ಎಂದು ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಭಾಷಣ ಮಾಡಿದ್ದಾರೆ.

ಅವರು ಉಜಿರೆಯಲ್ಲಿ ಶನಿವಾರ ನಡೆದ 'ರಾಮೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

"ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಇತ್ತೀಚೆಗೆ ಬಜರಂಗದಳದವರು ಒಂದು ಸಂಕಲ್ಪ ತಗೊಂಡಿದ್ದಾರೆ. 'ಜನಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ನಿಮ್ದು?' ಎಂದು ಬಜರಂಗದಳದ ಮುಖಂಡರನ್ನು ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಜನರನ್ನು ಮನವಿ ಮಾಡಿಕೊಳ್ತೇವೆ ಎಂದು ಹೇಳಿದ್ರು. ಆದ್ರೆ ನಮ್ಮ ಜನ ಎರಡ್ಮೂರು ಮಕ್ಕಳನ್ನು ಎಲ್ಲಿ ಮಾಡ್ತಾರೆ? ಮಕ್ಕಳನ್ನು ಪಂಕ್ಚರ್ ಹಾಕಲು ಕಳುಹಿಸಲು ಅವರಿಗೆ ಇಷ್ಟ ಇಲ್ಲ. ಅವರಿಗೆ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸುವ ಸಾಮರ್ಥ್ಯ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರಕಾರ ನಮಗಾಗಿ ಮಾಡಿರುವ ಕಾನೂನುಗಳನ್ನು ಬಳಸಿಕೊಳ್ಳಿ" ಎಂದು ಸೂಲಿಬೆಲೆ ಹೇಳಿದ್ದಾರೆ.

"ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಆದರೆ ಹೊಸ ಸರಕಾರ ಆ ಕಾನೂನನ್ನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರಕಾರವೇ ಅಧಿಕೃತವಾಗಿ ಹೇಳಿದೆ ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಮಾಡಲು ನಿಮಗೆ ಕಷ್ಟ ಏನು?" ಎಂದು ಅವರು ಪ್ರಶ್ನಿಸಿದ್ದಾರೆ.

"ಸಮಾಜದ ವಿವಿಧ ಜಾತಿಯ ಪ್ರಮುಖರು ನಿಮ್ಮ ನಿಮ್ಮ ಸಮಾಜದಿಂದ ಒಂದು ಘೋಷಣೆ ಹೊರಡಿಸಿ. 'ಯಾರಾದರೂ ಮತಾಂತರವಾಗಲು ಬಯಸಿದರೆ ನಮ್ಮ ಸಮಾಜ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತದೆ ಬನ್ನಿ' ಎಂದು ಕರೆಯಿರಿ. ಇದಕ್ಕಾಗಿ ನಿಮ್ಮ ಸಮಾಜದ ಸ್ವಾಮೀಜಿಗಳಿಂದ ಘೋಷಣೆ ಕೊಡಿಸಿ. ಈ ಹಿಂದೆ ನೀವು ಯಾವುದೇ ಜಾತಿಯಲ್ಲಿದ್ದರೂ ಸಮಸ್ಯೆ ಇಲ್ಲ, ನಮ್ಮ ಜಾತಿಗೆ ಸ್ವೀಕರಿಸುತ್ತೇವೆ ಎಂದು ಹೇಳಿ" ಎಂದು ಸೂಲಿಬೆಲೆ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X