ಝಕರಿಯಾ ಜೋಕಟ್ಟೆರಿಗೆ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಉದ್ಯಮಿ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ ನ. ೧೮ರಂದು ಹೋಟೆಲ್ ಶ್ರೀನಿವಾಸದಲ್ಲಿ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಇದ್ದು, ಉದ್ಯೋಗ ಕ್ಷೇತ್ರಕ್ಕೆ ಬೇಡಿಕೆ ಇದೆ. ಆದ್ದರಿಂದ ನಾನು ಕೂಡ ನಮ್ಮವರನ್ನು ನನ್ನೊಂದಿಗೆ ಬೆಳೆಸುತ್ತೇನೆ ಎಂದು ಭರವಸೆ ನೀಡಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಮಾನ್ಯ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯಮ ಕ್ಷೇತ್ರಕ್ಕೆ ಬೇಕಾದಂತಹ ಉನ್ನತ ಮಟ್ಟದ ಶಿಕ್ಷಣ ಹಾಗೂ ಪ್ರಾಯೋಗಿಕ ಶಿಕ್ಷಣವನ್ನು ನಮ್ಮ ವಿಶ್ವವಿದ್ಯಾಲಯದಲ್ಲಿ ನೀಡಲಾಗುತ್ತಿದೆ. ನಮ್ಮ ವಿದ್ಯಾರ್ಥಿಗಳು ಪ್ರಪಂಚದ ಪ್ರತಿ ಮೂಲೆಯಲ್ಲೂ ಕರ್ತವ್ಯ ನಿರ್ವಹಿಸುತ್ತಿರುವುದು ನಮ್ಮ ಹೆಮ್ಮೆ ಎಂದರು.
ಶ್ರೀನಿವಾಸ ವಿವಿ ಮಾನ್ಯ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಮಾತನಾಡಿ, ಸಮಾಜಕ್ಕೆ ಝಕರಿಯಾ ಅವರ ಕೊಡುಗೆ ಅಪಾರವಾಗಿದ್ದು, ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಅಭಿನಂದನೀಯ ಎಂದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ, ರೆಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ರಿಜಿಸ್ಟ್ರಾರ್ ಡಾ, ಶ್ರೀನಿವಾಸ ಮಯ್ಯ ಡಿ, ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್, ಶ್ರೀನಿವಾಸ ವಿವಿ ಹಣಕಾಸು ಅಧಿಕಾರಿ ಪ್ರೊ. ಅರ್ಪಣ ಭಟ್ಟ ಎಲ್. ಹಾಗೂ ವಿವಿಧ ಸಂಸ್ಥೆಗಳ ಡೀನ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.







