ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿ ಬಿದ್ದ ಬಸ್ : ಓರ್ವ ಮೃತ್ಯು, 18 ಮಂದಿಗೆ ಗಾಯ

Photo | indianexpress
ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಲ್ಖಾರ್ ಪ್ರದೇಶದಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಭಾರೀ ಮಳೆಗೆ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.
ಗಂಭೀರವಾಗಿ ಗಾಯಗೊಂಡ ಕೆಲವರನ್ನು ಮಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Next Story





