ಜಮ್ಮು ಕಾಶ್ಮೀರ | ಶಂಕಿತ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಮೃತ್ಯು

Photo | ಸಾಂದರ್ಭಿಕ ಚಿತ್ರ/ PTI
ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ ನ ಲಾಲೇಲಿಯಲ್ಲಿ ಶಂಕಿತ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟದಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಈ ಕುರಿತು ಭಾರತೀಯ ಸೇನೆಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಖ್ನೂರ್ ಸೆಕ್ಟರ್ ನ ಲಾಲೇಲಿಯ ಭಟ್ಟಾಲ್ ಪ್ರದೇಶದ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 3.50ರ ಸುಮಾರಿಗೆ ಗಸ್ತಿನ ವೇಳೆ ಐಇಡಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ಐಇಡಿ ಸ್ಪೋಟದಿಂದ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು, ಅವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ, ಇನ್ನುಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Next Story





