ಜಮ್ಮುಕಾಶ್ಮೀರ | ಕಂದಕಕ್ಕೆ ಉರುಳಿ ಬಿದ್ದ ಸೇನಾ ವಾಹನ : ಮೂವರು ಸೈನಿಕರು ಮೃತ್ಯು

Photo credit: NDTV
ಜಮ್ಮುಕಾಶ್ಮೀರ : ಜಮ್ಮುಕಾಶ್ಮೀರದ ರಾಮ್ಬನ್ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದು ಮೂವರು ಸೈನಿಕರು ಮೃತಪಟ್ಟಿದ್ದಾರೆ.
ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ.
ಸೇನಾ ವಾಹನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದಾಗ ಬ್ಯಾಟರಿ ಚಶ್ಮಾ ಬಳಿ ಅವಘಡ ಸಂಭವಿಸಿದೆ. ತಕ್ಷಣ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
Next Story





