ಸಿವಿಲ್ ಜಡ್ಜ್ ಹುದ್ದೆಗೆ ಅಭ್ಯರ್ಥಿಯಾಗಬೇಕಾದರೆ 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

Photo credit: PTI
ಹೊಸದಿಲ್ಲಿ: ಇನ್ನು ಮುಂದೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಬೇಕಾದರೆ ಕನಿಷ್ಠ ಮೂರು ವರ್ಷಗಳ ಕಾಲ ವಕೀಲ ವೃತ್ತಿ ಮಾಡಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.
"ಜೂನಿಯರ್ ಸಿವಿಲ್ ನ್ಯಾಯಾಧೀಶರ ಪರೀಕ್ಷೆಗೆ ಹಾಜರಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ಅನುಭವ ಹೊಂದಿರಬೇಕು ಎಂಬ ನಿಯಮವನ್ನು ಮತ್ತೆ ಆರಂಭಿಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ ಇದು ಈಗ ನಡೆಯುತ್ತಿರುವ ನ್ಯಾಯಾಂಗ ನೇಮಕಾತಿಗೆ ಅನ್ವಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.
"ಮುಂದಿನ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾದಾಗ ಮಾತ್ರ ಈ ನಿಯಮ ಅನ್ವಯಿಸುತ್ತದೆ", ಎಂದು ನ್ಯಾಯಾಲಯ ಹೇಳಿದೆ.
Next Story





