ಕಳೆದ 5 ವರ್ಷಗಳಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ 339 ಮಂದಿ ಸಾವು: ಸರ್ಕಾರದಿಂದ ಮಾಹಿತಿ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸುವ ವೇಳೆ 339 ಜನರು ಮೃತಪಟ್ಟಿದ್ದಾರೆಂದು ಸರ್ಕಾರದ ಅಂಕಿಅಂಶಗಳು ತಿಳಿಸುತ್ತವೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ಮೇಲಿನ ಮಾಹಿತಿ ನೀಡಿದ್ದಾರೆ.
ಈ ವರ್ಷ ಇಲ್ಲಿಯ ತನಕ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ 9 ಮಂದಿ ಮೃತಪಟ್ಟಿದ್ದರೆ, 2022 ರಲ್ಲಿ 66 ಮಂದಿ, 2021 ರಲ್ಲಿ 58 ಮಂದಿ, 2020 ರಲ್ಲಿ 22, 2019ರಲ್ಲಿ 117 ಮಂದಿ ಹಾಗೂ 2018 ರಲ್ಲಿ 67 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
Next Story





