Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆರಿಕ ವೀಸಾ ನಿರಾಕರಣೆ: ಆಂಧ್ರ ವೈದ್ಯೆ...

ಅಮೆರಿಕ ವೀಸಾ ನಿರಾಕರಣೆ: ಆಂಧ್ರ ವೈದ್ಯೆ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ24 Nov 2025 12:35 PM IST
share
ಅಮೆರಿಕ ವೀಸಾ ನಿರಾಕರಣೆ: ಆಂಧ್ರ ವೈದ್ಯೆ ಆತ್ಮಹತ್ಯೆ

ಹೈದರಾಬಾದ್: ಅಮೆರಿಕ ವೀಸಾ ನಿರಾಕರಣೆಯಿಂದ ಮನನೊಂದ 35 ವರ್ಷದ ವೈದ್ಯರೊಬ್ಬರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಪದ್ಮರಾವ್ ನಗರದಲ್ಲಿ ನಡೆದಿದೆ.

ಮೃತ ವೈದ್ಯೆಯನ್ನು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಿವಾಸಿ ಕೆ.ರೋಹಿಣಿ ಎಂದು ಗುರುತಿಸಲಾಗಿದ್ದು, ಅವರು 9 ವರ್ಷಗಳ ಹಿಂದೆ ರಶ್ಯದಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದರು ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಚಿಲ್ಕಲ್ಗುಡ ಸಬ್ ಇನ್ಸ್ ಪೆಕ್ಟರ್ ಜೆ.ರಾಕೇಶ್, “ಅಮೆರಿಕದಲ್ಲಿ ವೈದ್ಯಕೀಯ ವೃತ್ತಿ ನಡೆಸಬೇಕು ಎಂಬುದು ರೋಹಿಣಿಯ ಸುದೀರ್ಘ ಕಾಲದ ಬಯಕೆಯಾಗಿತ್ತು. ಅವರು ಅದಕ್ಕಾಗಿ ಸುಮಾರು ಎಂಟು ವರ್ಷಗಳಿಂದ ಅರ್ಹತಾ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಅದರಲ್ಲಿ ಉತ್ತಮ ಅಂಕಗಳನ್ನೂ ಗಳಿಸಿದ್ದ ಅವರು, ಬಳಿಕ ವಿದೇಶಕ್ಕೆ ತೆರಳುವ ಅವಕಾಶವನ್ನೂ ಪಡೆದಿದ್ದರು. ಆದರೆ, ಎರಡು ತಿಂಗಳ ಹಿಂದೆ ಅವರ ವೀಸಾ ಮನವಿ ತಿರಸ್ಕೃತಗೊಂಡಿತ್ತು. ಇದರಿಂದ ಅವರು ತೀರಾ ಬೇಸರಗೊಂಡಿದ್ದರು. ಇದೇ ವೇಳೆ ಅವರೆದುರು ವಿವಾಹ ಪ್ರಸ್ತಾವವೊಂದೂ ಮಂಡನೆಯಾಗಿತ್ತು. ಇದರಿಂದ ಅವರು ಮತ್ತಷ್ಟು ಖಿನ್ನರಾಗಿದ್ದರು” ಎಂದು ತಿಳಿಸಿದ್ದಾರೆ.

ಪದ್ಮರಾವ್ ನಗರದಲ್ಲಿ ಕಳೆದ ಏಳೆಂಟು ವರ್ಷಗಳಿಂದ ರೋಹಿಣಿ ಏಕಾಂಗಿಯಾಗಿಯೇ ವಾಸಿಸುತ್ತಿದ್ದರು. ಅವರ ಪೋಷಕರು ಆಗಾಗ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು. ಶುಕ್ರವಾರ ಅವರು ವಾಸಿಸುತ್ತಿದ್ದ ಮನೆಯ ಮನೆಯ ಬಾಗಿಲನ್ನು ಬಡಿದಾಗ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕುರಿತು ಗುಂಟೂರಿನಲ್ಲಿರುವ ಅವರ ಸಂಬಂಧಿಕರಿಗೆ ವಾಚ್‌ಮ್ಯಾನ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕುಟುಂಬದ ಸದಸ್ಯರು ಆಕೆಯ ನಿವಾಸಕ್ಕೆ ಧಾವಿಸಿ ಬಂದಿದ್ದಾರೆ. ಮನೆಯ ಬಾಗಿಲು ಒಡೆದು ಒಳಗೆ ಹೋದಾಗ, ಆಕೆ ರಕ್ತ ವಾಂತಿ ಮಾಡಿಕೊಂಡು ಮೃತಪಟ್ಟಿರುವುದು ಪತ್ತೆಯಾಗಿದೆ.

ಮೃತ ರೋಹಿಣಿ ತಾವು ನಿತ್ಯ ಸೇವಿಸುತ್ತಿದ್ದ ನಿದ್ರೆ ಮಾತ್ರೆಯನ್ನು ಅತಿಯಾಗಿ ಸೇವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಶನಿವಾರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X