ಮುಂಬೈ | ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : ನಾಲ್ವರು ಮೃತ್ಯು, 10 ಜನರಿಗೆ ಗಾಯ

Photo credit: NDTV
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು,10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶಿ(Vashi) ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ 10ನೇ ಮಹಡಿಯಲ್ಲಿರುವ ಫ್ಲಾಟ್ನಲ್ಲಿ ರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಮತ್ತು ಬೆಂಕಿಯು 11 ಮತ್ತು 12ನೇ ಮಹಡಿಗಳಿಗೆ ವ್ಯಾಪಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು, ಓರ್ವ ಪುರುಷ ಮತ್ತು 6 ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಾಶಿಯ ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಅಗ್ನಿ ಅನಾಹುತದ ಕಾರಣಗಳ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.
Next Story





