ಮಣಿಪುರ | ಮಹಿಳೆ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ
ಅಪರಿಚಿತ ಬಂದೂಕುದಾರಿಯಿಂದ ಕೃತ್ಯ

ಸಾಂದರ್ಭಿಕ ಚಿತ್ರ
ಇಂಫಾಲ್: ಮಣಿಪುರದ ಚುರಾಚಂದ್ಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಸೇರಿದಂತೆ ನಾಲ್ವರನ್ನು ಅಪರಿಚಿತ ಬಂದೂಕುದಾರಿಯೋರ್ವ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಚುರಾಚಂದ್ಪುರದ ಮೊಂಗ್ಜಾಂಗ್ ಗ್ರಾಮದ ಬಳಿ ಘಟನೆ ನಡೆದಿದೆ. ಕುಕಿ ಮತ್ತು ಮೈತೈ ಸಮುದಾಯಗಳ ನಡುವಿನ ಸಂಘರ್ಷಕ್ಕೂ ಈ ಘಟನೆಗೂ ಸಂಬಂಧವಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ಘಟನೆಯು ಕುಕಿ ಸಶಸ್ತ್ರದಾರಿಗಳ ನಡುವಿನ ಅಂತರಿಕ ಗುಂಪು ಘರ್ಷಣೆಯಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ವರದಿಯಾಗಿದೆ.
Next Story





